

ರಾಯಚೂರು ಮಕ್ಕಳನ್ನು ಕೆಲಸಕ್ಕೆ ಕಳುಹಿಸದೆ ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಽÃಶರಾದ ಎಚ್.ಎ.ಸಾತ್ವಿಕ ಹೇಳಿದರು.
ನಗರದ ದೇವಿನಗರ ಬಡಾವಣೆಯಲ್ಲಿ ಇತ್ತಿಚ್ಚಿಗೆ ಜಿ¯್ಲÁ ಕಾನೂನು ಸೇವೆಗಳ ಪ್ರಾಽಕಾರ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿ¯್ಲÁ ಬಾಲಕಾರ್ಮಿಕ ಯೋಜನೆಯಿಂದ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ದೇಶದ ಭವಿಷ್ಯವಾಗಿರುತ್ತಾರೆ. ಮಕ್ಕಳಿಗೆ ಶಿಕ್ಷಣವನ್ನು ನೀಡಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಆದ್ದರಿಂದ ಮಕ್ಕಳನ್ನು ಕೆಲಸಕ್ಕೆ ಕಳಿಸದೇ ಅವರಿಗೆ ಶಿಕ್ಷಣವನ್ನು ನೀಡಲು ಮುಂದಾಗಬೇಕು ಒಂದು ವೇಳೆ ಕಾನೂನು ಉಲ್ಲಂöಸಿದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿ¯್ಲÁ ಕಾರ್ಮಿಕ ಅಽಕಾರಿ ಆರತಿ ಮಾತನಾಡಿ, ಜಿ¯್ಲÉಯಾದ್ಯಂತ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ರಕ್ಷಣೆಗಾಗಿ ತಂಡದ ಮೂಲಕ ಹಠಾತ್ ದಾಳಿಗಳನ್ನು ಕೈಗೊಂಡು, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದು ಕಂಡುಬಅದಲ್ಲಿ ತಪ್ಪಿತಸ್ಥ ಮಾಲೀಕರ ವಿರುದ್ಧ ಸಂಬAಧ ಪಟ್ಟ ಪೋಲಿಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ ಹಾಗೂ ಪತ್ತೆ ಹಚ್ಚಲಾದ ಬಾಲಕಾರ್ಮಿಕ ಅಥವಾ ಕಿಶೋರ ಕಾರ್ಮಿಕರನ್ನು ಕೆಲಸದಿಂದ ರಕ್ಷಿಸಿ ಪುನರ್ವಸತಿ ಕಲ್ಪಿಸಲಾಗುತ್ತಿದೆಂದರು.
ಈ ಸಂದರ್ಭದಲ್ಲಿ ಜಿ¯್ಲÁ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ , ಶಿವಪ್ಪ ಉಪ್ರಾಳ, ರುಕ್ಮಿಣಿ ಬಾಯಿ, ಮಹ್ಮದ ಉಮರ್ ಅಬ್ದುಲï ಘನಿ ಸೇರಿದಂತೆ ಕಾರ್ಮಿಕ ಇಲಾಖೆಯ ಅಽಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.