ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮುಖ್ಯ

Published on

ನಾಪೋಕ್ಲು: ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮುಖ್ಯ ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕುರಿತು ಇಲ್ಲಿನ ರಾಮ ಟ್ರಸ್ಟ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು. ಪಾಲಕರ ಉದ್ದೇಶ ಅರ್ಥ ಮಾಡಿಕೊಳ್ಳಬೇಕು. ಉತ್ತಮರೊಂದಿಗೆ ಗೆಳೆತನ ಮಾಡಬೇಕು. ತಾರುಣ್ಯಾವಸ್ಥೆಯಲ್ಲಿ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಮೊಬೈಲ್ ಫೋನ್ ಬಳಕೆ ಮಿತವಾಗಿರಲಿ. ವಾಹನ ಚಾಲನೆ ಮಾಡುವ ಮುನ್ನ ಡಿಎಲ್ ದಾಖಲೆ ಬಹು ಮುಖ್ಯ ಎಂದು ಸಲಹೆ ನೀಡಿದರು.

ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ, ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ನಿರ್ದೇಶಕರಾದ ಬಿದ್ದಾಟಂಡ ಮುದ್ದಯ್ಯ, ಕೊಂಬಂಡ ಗಣೇಶ ನಿವೃತ್ತ ಪ್ರೊ.ಕಲ್ಯಾಟಂಡ ಪೂಣಚ್ಚ, ಮುಖ್ಯ ಶಿಕ್ಷಕಿ ಶಾರದಾ ಅಪ್ಪಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net