ಮಹಿಳೆಯರಿಗೆ ಕಾನೂನು ಅರಿವು ಮುಖ್ಯ

Oplus_131072
Oplus_131072
Published on

ಯಳಂದೂರು : ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ಕಾನೂನಿನ ಅರಿವು ಅವಶ್ಯಕವಾಗಿ ಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದರು.

ಸಂತೆಮರಹಳ್ಳಿ ಗ್ರಾಮದ ಕಲ್ಯಾಣ ಮಂಟಪದಲ್ಲಿ ಮಹಿಳೆಯರಿಗೆ ಇತ್ತೀಚೆಗೆ ಆಯೋಜಿಸಿದ್ದ ಜನ ಸಂಪರ್ಕ ಸಭೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಕಾನೂನಿನ ಸಾಮಾನ್ಯ ಜ್ಞಾನ ಅರಿಯುವುದರಿಂದ ಧೈರ್ಯದಿಂದ ಸಮಾಜದಲ್ಲಿ ಜೀವನ ಮಾಡಬಹುದು. ನಮ್ಮ ದೇಶದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನಗಳಿವೆ. ಇದರ ನಡುವೆಯೂ ಮಹಿಳಾ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಪ್ರತಿಯೊಬ್ಬ ಮಹಿಳೆಯೂ ಕಾನೂನಿನ ಅರಿವು ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಪರವಾದ ಕಾನೂನಿನ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮಾತನಾಡಿದರು. ಸಂತೆಮರಳ್ಳಿ ವೃತ್ತ ನಿರೀಕ್ಷಕ ಬಸವರಾಜ್, ಪಿಎಸ್‌ಐ ತಾಜುದ್ದೀನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net