

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ವಕೀಲರ ಸಂಘ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ವಿದ್ಯಾರ್ಥಿಗಳು ಮೂಲಭೂತ ಕಾನೂನುಗಳ ಅರಿವು ಹೊಂದುವುದು ಅಗತ್ಯ ಎಂದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿ, ವಿದ್ಯಾರ್ಥಿಗಳು ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಪ್ರಾಮುಖ್ಯ ನೀಡಬೇಕು ಎಂದರು.
ವಕೀಲ ಚಿದಾನಂದ ಪಿ.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬಾಲ ಕಾರ್ಮಿಕ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯಶಿಕ್ಷಕಿ ಹೇಮಲತಾ ಎಂ.ಆರ್.ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಆರಾಧ್ಯ ಸ್ವಾಗತಿಸಿ, ಪ್ರಶ್ಯ ವಂದಿಸಿದರು. ಶಿಕ್ಷಕ ಮುರಳಿ ಕಾರ್ಯಕ್ರಮ ನಿರೂಪಿಸಿದರು.