ಪೋಕ್ಸೋ ಇದ್ದರೂ ನಿಲ್ಲದ ದೌರ್ಜನ್ಯ, ಶೋಷಣೆ

chn
Published on

ಚನ್ನಗಿರಿ: ಮಕ್ಕಳ ಮೇಲೆ ನಡೆಯುವ ಲೈಂಗಿಕ ಅಪರಾಧ, ಅತ್ಯಾಚಾರ ಪ್ರಕರಣ ಅತ್ಯಂತ ಪರಿಣಾಮಕಾರಿಯಾಗಿ ತಡೆಗಟ್ಟಲು, ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರುಪಡಿಸಲು 2012ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ಆದರೂ, ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ ಎಂದು ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಧೀಶರಾದ ಸಿದ್ದಲಿಂಗಯ್ಯ ಗಂಗಾಧರ ಮಠ್ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ತ್ಯಾವಣಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಅವರಣದಲ್ಲಿ ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನ ಚನ್ನಗಿರಿ ಶಾಖೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಪೋಕ್ಸೋ ಕಾಯ್ದೆ ಜಾಗೃತಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ, ಬುಧವಾರ ಮಾತನಾಡಿದರು.

ಕಾಯ್ದೆ ಜಾರಿಗೊಂಡು ದಶಕಗಳೇ ಕಳೆದರೂ ಅಪರಾಧ ಚಟುವಟಿಕೆ ಇನ್ನು ಹತೋಟಿಗೆ ಬಾರದಿರುವುದು ವಿಷಾದಕರ ಸಂಗತಿ. ದೇಶ ಸಾಕಷ್ಟು ಅಭಿವೃದ್ಧ್ದಿ ಪಥದತ್ತ ಸಾಗುತ್ತಿದ್ದರೂ ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ಮಾತ್ರ ಇನ್ನು ನಿಂತಿಲ್ಲ, ಪೋಕ್ಸೋ ಕಾಯ್ದೆ ಬಗ್ಗೆ ಮಕ್ಕಳು, ಪಾಲಕರು, ಶಿಕ್ಷಕರಲ್ಲಿ ಸಮರ್ಪಕವಾಗಿ ಅರಿವಿಲ್ಲದ ಕಾರಣ ಬಹುತೇಕ ಪ್ರಕರಣ ಎಲ್ಲಿಯೂ ವರದಿಯಾಗದೆ ಮರೆಯಾಗುತ್ತಿದೆ ಎಂದರು.

ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನ ಜಿಲ್ಲಾಧ್ಯಕ್ಷ ಕೆ.ಬಿ. ಮಂಜುನಾಥ್ ಮಾತನಾಡಿ, ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಫೋಕ್ಸೋ ಕಾಯ್ದೆ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅವಶ್ಯ. ದೇಶದ ಪ್ರತಿಯೊಬ್ಬರೂ ಹೆಣ್ಣನ್ನು ದೇವತೆ ಎಂದು ಗೌರವಿಸಬೇಕು. ನಮ್ಮ ಮನೆಯಲ್ಲಿ ತಾಯಿ, ಮಗಳು, ಅಕ್ಕ ತಂಗಿ ರೂಪದಲ್ಲಿ ಇರುತ್ತಾರೆ ಎನ್ನುವುದನ್ನು ಮರೆಯಬಾರದು ಎಂದರು.
ಕರೇಕಟ್ಟೆ ಎ.ಕೆ. ದೇವೇಂದ್ರಪ್ಪ, ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ರಾಜ್ಯ ಕಾರ್ಯದರ್ಶಿ ಎಂ.ಡಿ. ಅಲೀಂ, ತಾಲೂಕು ಅಧ್ಯಕ್ಷ ಸಿ.ಆರ್. ನಾಗೇಂದ್ರಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಶ್ ಪಟೇಲ್, ತಾಲೂಕು ಕಾರ್ಯದರ್ಶಿ ನಾಗರಾಜ ಟಿ. ಹೀರೆಮಳಲಿ, ವಕೀಲರ ಸಂಘದ ಅಧ್ಯಕ್ಷ ಎಂ. ರಾಜಪ್ಪ, ಕಾರ್ಯದರ್ಶಿ ಎಂ.ಎಸ್. ಜಗದೀಶ್, ಉಪಾಧ್ಯಕ್ಷ ಬಾಬುಜಾನ್, ಪ್ರಾಚಾರ್ಯ ವಿ.ಎಸ್. ಮಲ್ಲಿಕಾರ್ಜುನ, ಮುಖ್ಯಶಿಕ್ಷಕ ಆರ್. ಶರಣಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷ ಅಣ್ಣಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net