

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯದಲ್ಲಿ 6 ಕಾಯಂ ಜನತಾ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಧಾರವಾಡ ಕಾಯಂ ಜನತಾ ನ್ಯಾಯಾಲಯ ಧಾರವಾಡ, ಬಳ್ಳಾರಿ, ಗದಗ, ಕೊಪ್ಪಳ, ಹಾವೇರಿ, ದಾವಣಗೆರೆ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರಕರಣಗಳನ್ನು ದಾಖಲು ಮಾಡಿಕೊಂಡು ತೀರ್ಪು ನೀಡುವ ಅಧಿಕಾರ ಹೊಂದಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಕಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ನಾಗರಾಜಪ್ಪ ಎ.ಕೆ. ಹೇಳಿದರು.
ನಗರದ ಕೆಪಿಇಎಸ್ ಡಾ. ಜಿ.ಎಂ. ಪಾಟೀಲ ಕಾನೂನು ಮಹಾವಿದ್ಯಾಲಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಶುಕ್ರವಾರ ಆಯೋಜಿಸಿದ್ದ ಕಾಯಂ ಜನತಾ ನ್ಯಾಯಾಲಯ ಕುರಿತು ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ವೇದಿಕೆಯಲ್ಲಿದ್ದರು ಕಾಲೇಜಿನ ಪ್ರಾಚಾರ್ಯ ಸಂಜೀವ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಪ್ರಾಧ್ಯಾಪಕಿ ಡಾ. ಶ್ವೇತಾ ದೇಶಪಾಂಡೆ ಹಾಗೂ ಭೋದಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.