ಕಾನೂನಿನ ಸಾಮಾನ್ಯ ಜ್ಞಾನ ಇರಲಿ

24 Ylb 03
ಯಲಬುರ್ಗಾದಲ್ಲಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ರಂಗಸ್ವಾಮಿ ಉದ್ಘಾಟಿಸಿದರು. ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್ ಇದ್ದರು.
Published on

ಯಲಬುರ್ಗಾ: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಖರೀದಿ ಹೆಚ್ಚಾಗಿದೆ. ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ರಂಗಸ್ವಾಮಿ ಹೇಳಿದರು.

ಪಟ್ಟಣದ ಬಿಸಿಎಂ ಇಲಾಖೆ ಕಚೇರಿ ಸಭಾಂಗಣದಲ್ಲಿ ವಕೀಲರ ಸಂಘ, ತಾಲೂಕಾಡಳಿತ, ತಾಪಂ, ಬಿಸಿಎಂ ಹಾಗೂ ನಾನಾ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಹಕರು ಖರೀದಿಸಿದ ವಸ್ತುವಿನ ಬಿಲ್ ಪಡೆಯಬೇಕು. ಅಂದಾಗ ಮಾತ್ರ ವ್ಯವಹಾರದಲ್ಲಿ ಮೋಸ ಆದಾಗ ನಿಮ್ಮ ಹಕ್ಕು ಚಲಾಯಿಸಲು ಸಾಧ್ಯ. ಆನ್‌ಲೈನ್‌ನಲ್ಲಿ ವಸ್ತುಗಳ ಖರೀದಿ ಬಗ್ಗೆ ಕಾನೂನಿನ ಸಾಮಾನ್ಯ ಜ್ಞಾನ ಇರಬೇಕು. ಮೋಸ ಹೋದಾಗ ಸಮಸ್ಯೆ ಯಾವ ರೀತಿ ಬಗೆಹರಿಸಿಕೊಳ್ಳಬೇಕು ಎನ್ನುವ ಕುರಿತು ಕಾನೂನು ಗೊತ್ತಿರಬೇಕು ಎಂದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬೇಲೇರಿ, ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್, ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್,

ವಕೀಲ ಎ.ಎಂ.ಪಾಟೀಲ್, ಶಿರಸ್ತೇದಾರ್ ಮಲ್ಲಿಕಾರ್ಜುನ ಶಾಸ್ತ್ರಿ ಮಠ, ಅಂಗನವಾಡಿ ಮೇಲ್ವಿಚಾರಕಿಯರಾದ ಜಯಲಕ್ಷ್ಮೀ, ಮಾದವಿ ವೈದ್ಯ, ಕಾನೂನು ಸೇವಾ ಸಮಿತಿ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ, ವಿನಾಯಕ, ಸಂಪನ್ಮೂಲ ವ್ಯಕ್ತಿ ಭೀಮಪ್ಪ ಹವಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net