ಆಳ್ವಾಸ್‌ ಕಾಲೇಜಿನಲ್ಲಿ ಕಾನೂನು ಸೇವಾ ಶಿಬಿರಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಚಾಲನೆ

IMG-20211230-WA0017
Published on

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮೂಡುಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾಲೇಜಿನ ನುಡಿಸಿರಿ ಸಭಾಭವನದಲ್ಲಿ ಆಯೋಜಿಸಲಾಗಿರುವ ಕಾನೂನು ಸೇವಾ ಶಿಬಿರವನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರು ಗುರುವಾರ ಉದ್ಘಾಟಿಸಿದರು.
ಹೈಕೋರ್ಟ್‍ನ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ. ವೀರಪ್ಪ ಮುಖ್ಯ ಅತಿಥಿಯಾಗಿದ್ದರು. ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮುರಲಿಧರ ಪೈ. ಬಿ., ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ತಂತ್ರಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಅಕ್ಷರ ಸಂತ ಹರೇಕಳ ಹಾಜಬ್ಬ, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net