ಕೌಟುಂಬಿಕ ದೌರ್ಜನ್ಯ ನಿಭಾಯಿಸಲು ಕಾನೂನು ಕಾರ್ಯಾಗಾರ

mng- sep 27- legal workshop
Published on

ಮಂಗಳೂರು: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-2005 ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳು, ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾ ಅಧಿಕಾರಿಗಳು, ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿಗಳು ಮತ್ತು ಕಾನೂನು ಸಲಹೆಗಾರರಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ ಎರಡು ದಿನಗಳ ಕಾನೂನು ಕಾರ್ಯಾಗಾರ ಮಂಗಳವಾರ ಆರಂಭಗೊಂಡಿತು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ
ಕಾರ್ಯಾಗಾರ ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಜಿ. ಶೋಭಾ ಉದ್ಘಾಟಿಸಿದರು.
ಮಹಿಳೆಯರ ಸಂರಕ್ಷಣಾ ತಡೆ ಕಾಯಿದೆ-2005 ಬಗ್ಗೆ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ಉಪನ್ಯಾಸ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಟಿ. ಪಾಪ ಬೋವಿ, ಮಂಗಳೂರು ನಗರ ಸಂಶೋಧನಾ ಕೇಂದ್ರದ ನಿರ್ದೇಶಕಿ ಹರಿಣಿ ಮುಖ್ಯ ಅತಿಥಿಯಾಗಿದ್ದರು.
ಎರಡು ದಿನಗಳ ಕಾರ್ಯಾಗಾರದಲ್ಲಿ ನ್ಯಾಯವಾದಿಗಳಾದ ಎಸ್.ಪಿ. ಚಂಗಪ್ಪ, ನಿಕೇಶ್ ಶೆಟ್ಟಿ, ಗೌರಿ ಪೈ, ಹರಿಣಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net