

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಎಂಬ ಖ್ಯಾತಿಗೆ ಪಾತ್ರವಾಗಿರುವ ಬಲರಾಮ(67) ಆನೆಯೂ ನಿಧನವಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮನ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಇಹಲೋಕ ತ್ಯಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಲರಾಮನ ಗಂಟಲಲ್ಲಿ ಹುಣ್ಣಾಗಿದ್ದ ಕಾರಣ ಕಳೆದ ಏಳು ದಿನಗಳಿಂದ ಏನನ್ನು ಸೇವಿಸದೆ ಆನೆ ನಿತ್ರಾಣಗೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಶು ವೈದ್ಯರ ಸೂಚನೆ ಮೇರೆಗೆ ಎಂಡೋಸ್ಕೋಪಿ ಮೂಲಕ ಆಹಾರ ನೀಡಲು ಮುಂದಾಗಿತ್ತು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ನೀಡಲಾಗುತ್ತಿತ್ತು ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಪಶು ವೈದ್ಯರು ಹಾಗೂ ಅರಣ್ಯ ಅಧಿಕಾರಿಗಳು ಬಲರಾಮನನ್ನು ಉಳಿಸಿಕೊಳ್ಳಲು ಸತತವಾಗಿ ಪ್ರಯತ್ನಪಟ್ಟರು ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದೆ.
ಕ್ಷಯರೋಗ(TB) ಇಂದ ಬಲರಾಮ ಬಳಲುತ್ತಿದ್ದ ಎಂದು ಶಂಕಿಸಿರುವ ಅಧಿಕಾರಿಗಳು ಆನೆಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.