ತೈಲೂರಮ್ಮಗೆ ನಿಂಬೆ ಅಲಂಕಾರ

24M.D.R.13
ಮದ್ದೂರು ಪಟ್ಟಣದ ಶ್ರೀ ಮದ್ದೂರಮ್ಮ ದೇಗುಲದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಭಕ್ತಾಧಿಗಳು ವಿಶೇಷ ಪೂಜೆ ಸಲ್ಲಿಸಿದರು.
Published on

ಮದ್ದೂರು: ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ದೇವಾಲಯಗಳಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಗುರುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ, ಶ್ರೀ ಹೊಳೆ ಆಂಜನೇಯ ಸ್ವಾಮಿ, ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ, ಶ್ರೀ ಉಗ್ರ ನರಸಿಂಹಸ್ವಾಮಿ ಹಾಗೂ ತಾಲೂಕಿನ ತೈಲೂರು ಗ್ರಾಮದ ತೈಲೂರಮ್ಮ ದೇವಸ್ಥಾನ, ಚಿಕ್ಕಂಕನಹಳ್ಳಿ ಶ್ರೀ ನಂದಿ ಬಸವೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಭಕ್ತರು ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಪುನೀತರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net