ಹೆಡತಲೆ ಸುತ್ತಮುತ್ತ ಚಿರತೆ ಹಾವಳಿ

leapard
Published on

ನಂಜನಗೂಡು: ತಾಲೂಕಿನ ಹೆಡತಲೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹೆಮ್ಮರಗಾಲ, ಕುಂಬರಹಳ್ಳಿ, ಶ್ರೀನಗರ ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿಂದ ಚಿರತೆ ಹಾವಳಿಯಿಂದ ಗ್ರಾಮಸ್ಥರು ಹೈರಾಣಾಗಿದ್ದಾರೆ.

ಪ್ರತಿದಿನ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕುರಿ, ಮೇಕೆ, ಹಸುಗಳನ್ನು ಬಲಿ ಪಡೆಯುತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಗುರುವಾರ ರಾತ್ರಿ ಬೈಕ್‌ನಲ್ಲಿ ಹೆಡತಲೆ ಗ್ರಾಮಸ್ಥರು ಬರುತ್ತಿದ್ದ ವೇಳೆ ರಸ್ತೆ ಪಕ್ಕದ ಸೇತುವೆಯ ಮೇಲೆ ಕುಳಿತಿದ್ದ ದೃಶ್ಯವನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಪ್ರತಿದಿನ ಕೂಲಿ ಕಾರ್ಮಿಕರು ಮತ್ತು ರೈತರು ಜಮೀನಿಗೆ ತೆರಳಲು ಭಯದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಬೋನು ಇರಿಸಿದ್ದರೂ ಚಿರತೆ ಬೋನಿಗೆ ಬೀಳುತ್ತಿಲ್ಲ. ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಚಿರತೆ ಸೆರೆಗೆ ಮುಂದಾಗುವಂತೆ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net