ಏಕಾಏಕಿ ಚಿರತೆ ದಾಳಿ: ರೈತನಿಗೆ ಗಂಭೀರ ಗಾಯ

Leopard (1)
Published on

ನಾಗಮಂಗಲ: ತಾಲೂಕಿನ ಬೆಳ್ಳೂರು ಹೋಬಳಿ ಕರಿಜೀರಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಚಿರತೆ ದಾಳಿ ರೈತನನ್ನು ಗಂಭೀರವಾಗಿ ಗಾಯಗೊಳಿಸಿದೆ.

ಗ್ರಾಮದ ರಮೇಶ್(50) ದಾಳಿಗೊಳಗಾದವರು. ಇವರು ಎಂದಿನಂತೆ ಎಮ್ಮೆ, ಹಸುಗಳನ್ನು ಮೇಯಿಸಿಕೊಂಡು ಸಂಜೆ ಮನೆಗೆ ಹೋಗುತ್ತಿದ್ದ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ರಮೇಶ್‌ಗೆ ಎಮ್ಮೆ, ಹಸುಗಳು ಪ್ರತಿರೋಧ ಕೊಟ್ಟ ಹಿನ್ನೆಲೆಯಲ್ಲಿ ಚಿರತೆ ಸ್ಥಳದಿಂದ ಓಡಿ ಹೋಗಿದೆ. ಗಾಯಾಳು ರಮೇಶ್ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net