ಚಿರತೆ ಸೆರೆ

ಚಿರತೆ ಸೆರೆ
Published on

ಗುಂಡ್ಲುಪೇಟೆ: ತಾಲೂಕಿನ ಹಕ್ಕಲಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಾನುವಾರುಗಳನ್ನು ಕೊಲ್ಲುತ್ತಿದ್ದ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಗ್ರಾಮದ ಸತೀಶ್ ಎಂಬುವರ ಜಮೀನಿನಲ್ಲಿ ಬೋನು ಅಳವಡಿಸಿತ್ತು. ಚಿರತೆಯನ್ನು ಆಕರ್ಷಿಸಲು ಬೋನಿನೊಳಗೆ ಕರುವನ್ನು ಕೂಡಿಹಾಕಲಾಗಿತ್ತು. ಶುಕ್ರವಾರ ನಸುಕಿನಲ್ಲಿ ಕರುವನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದ್ದು ಇದನ್ನು ಬಂಡೀಪುರ ಅರಣ್ಯಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net