ಉರುಳಿಗೆ ಸಿಲುಕಿ ಚಿರತೆ ಸಾವು

Published on

ಸುಳ್ಯ: ಕಾಡುಪ್ರಾಣಿಗಳಿಗೆಂದು ಇರಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದೆ.

ಪಡ್ಡಂಬೈಲು ಎಂಬಲ್ಲಿ ಸುಮಾರು ಒಂದೂವರೆ ವರ್ಷದ ಚಿರತೆ ಉರುಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದ್ದು, ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವನ್ಯಜೀವಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾಹಿತಿ ನೀಡಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net