

ಮಂಡ್ಯ: ತಾಲೂಕಿನ ಕೀಲಾರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ದುಬಾರಿ ಮೌಲ್ಯದ ಹಸುವನ್ನು ಕೊಂದು ಹಾಕಿದೆ.
ಗ್ರಾಮದ ರಾಜು ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ. ಇವರಿಗೆ ಸೇರಿದ ಮೂರು ಜಾನುವಾರುಗಳನ್ನು ಬೆಳಗ್ಗೆಯಿಂದ ಸಂಜೆವರೆಗೂ ಜಮೀನಿನಲ್ಲಿ ಮೇಯಿಸಿ ಸಂಜೆ ಹೊತ್ತಿಗೆ ಮನೆಗೆ ಕರೆದುಕೊಂಡು ಬರಲಾಗುತ್ತಿತ್ತು. ಆದರೆ ಎರಡು ಮಾತ್ರ ಬಂದ ಹಿನ್ನೆಲೆಯಲ್ಲಿ ಕುಟುಂಬದವರ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಮರುದಿನ ಗ್ರಾಮದಿಂದ ಸುಮಾರು 100 ಮೀಟರ್ ದೂರದಲ್ಲಿರುವ ದೊಡ್ಡಬಾಣಸವಾಡಿ ರಸ್ತೆಯಲ್ಲಿ ಸತ್ತು ಬಿದ್ದಿರುವುದು ಗೊತ್ತಾಗಿದೆ. ಚಿರತೆಯ ಹೆಜ್ಜೆ ಗುರುತು ಸ್ಥಳದಲ್ಲಿಯೇ ಪತ್ತೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಮೂರ‌್ನಾಲ್ಕು ತಿಂಗಳಿನಿಂದ ಚಿರತೆ ಹಾವಳಿ ಹೆಚ್ಚಾಗಿದೆ. ಪರಿಣಾಮ ಜನರು ಜಮೀನಿಗೆ ಹೋಗಲು ಹೆದರುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಚಿರತೆ ಸೆರೆ ಹಿಡಿಯುವಂತೆ ಕೀಲಾರ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಸ್.ರಮೇಶ್ ಒತ್ತಾಯಿಸಿದ್ದಾರೆ.