ಅಂಬುಳ್ಳಿಯಲ್ಲಿ ಚಿರತೆ ಓಡಾಟ

20 ylp 02 (chirate)
Published on

ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾಪಂ ವ್ಯಾಪ್ತಿಯ ಅಂಬುಳ್ಳಿಯಲ್ಲಿ ನಾಗೇಶ ಭಟ್ಟ ಅವರ ಮನೆಯಂಗಳದಲ್ಲಿ ಮಂಗಳವಾರ ರಾತ್ರಿ ಚಿರತೆಯೊಂದು ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮನೆ ಬಾಗಿಲಿನಲ್ಲಿ ಚಿರತೆಯ ಓಡಾಟ ಸುದ್ದಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ವಿಷಯ ತಿಳಿದು ಬುಧವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಅಂಬುಳ್ಳಿಗೆ ಭೇಟಿ ನೀಡಿದರು. ಚಿರತೆಯ ಓಡಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಬಗ್ಗೆ ಸ್ಥಳೀಯರು ಅಧಿಕಾರಿಗಳಲ್ಲಿ ಮನವಿ ಮಾಡಿದರು. ಪಂಜರ ಇಟ್ಟು ಚಿರತೆಯನ್ನು ಹಿಡಿಯುವ ಪ್ರಯತ್ನ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net