ಆತಂಕ ಮೂಡಿಸಿದ ಚಿರತೆ ಲದ್ದಿ !

28 SRS 3
Published on

ಶಿರಸಿ: ತಾಲೂಕಿನ ಬಾಳಗಾರ ಗ್ರಾಮದ ಬೆಟ್ಟ ಗುಡ್ಡಗಳಲ್ಲಿ ಚಿರತೆ ಸಂಚರಿಸುತ್ತಿರುವ ಅಂಶ ಬೆಳಕಿಗೆ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ರಸ್ತೆಯಲ್ಲಿ ಕಳೆದ ಎರಡು ಮೂರು ದಿನಗಳ ಹಿಂದೆ ಚಿರತೆಯೊಂದು ಮೂತ್ರ ಮಾಡಿ, ಲದ್ದಿ ಹಾಕಿ ಹೋಗಿರುವುದು ಕಂಡುಬಂದಿದೆ. ಆದರೆ, ಯಾವುದೇ ಸಾಕು ಪ್ರಾಣಿಗಳು ಚಿರತೆ ಬಾಯಿಗೆ ತುತ್ತಾದ, ಕಾಣೆಯಾಗಿರುವುದಾಗಲಿ, ಚಿರತೆಯನ್ನು ನೋಡಿದ್ದರ ಬಗ್ಗೆಯಾಗಲಿ ವರದಿಯಾಗಿಲ್ಲ.

ಬಾಳಗಾರ ಶಾಲೆಯ ಎದುರು ಕಂಡುಬಂದ ಚಿರತೆ ಲದ್ದಿ ಆತಂಕ ಉಂಟು ಮಾಡಿದೆ. ಸ್ವಲ್ಪ ದಿನಗಳ ಹಿಂದೆ ಇದರ ಸಮೀಪವೇ ಅನತಿ ದೂರದಲ್ಲಿ ಇದೇ ತರಹದ ಲದ್ದಿ ಕಂಡಿತ್ತು. ಅಂದರೆ ಈ ಭಾಗದಲ್ಲಿ ಎರಡು ಚಿರತೆಗಳು ಓಡಾಡುತ್ತಿವೆ. ಇಲಾಖೆಯವರು ಸ್ಥಳ ಪರಿಶೀಲಿಸಿ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಇತಿಹಾಸ ತಜ್ಞ ಡಾ.ಬಾಲಕೃಷ್ಣ ಹೆಗಡೆ ಆಗ್ರಹಿಸಿದ್ದಾರೆ.

ಈ ಭಾಗದಲ್ಲಿ ಚಿರತೆ ಓಡಾಟ ಇದೆ. ಚಿರತೆಯದ್ದೇ ಲದ್ದಿ ಆಗಿರಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಾರೆ.>ಡಾ.ಅಜ್ಜಯ್ಯ, ಡಿಎಫ್‌ಒ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net