ಮೈಸೂರು ನಗರದ ಶ್ರೀ ರಾಮಕೃಷ್ಣ ವಿದ್ಯಾಶಾಲಾ ಆವರಣದಲ್ಲಿ ಚಿರತೆ ಪ್ರತ್ಯಕ್ಷ

Chirate
Published on

ಮೈಸೂರು: ಮೈಸೂರು ಸಮೀಪದ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಬೆನ್ನಲ್ಲೇ ನಗರದ ಯಾದವಗಿರಿಯಲ್ಲಿನ ರಾಮಕೃಷ್ಣ ಆಶ್ರಮದ ಶ್ರೀ ರಾಮಕೃಷ್ಣ ವಿದ್ಯಾಶಾಲಾ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಹಾಗೂ ಸುತ್ತ-ಮುತ್ತಲ ಬಡಾವಣೆಯ ನಿವಾಸಿಗಳು ಭಯಭೀತರಾಗಿದ್ದಾರೆ.

ಕಳೆದ ಮೂರು ದಿನಗಳಿಂದ ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಆವರಣದಲ್ಲಿ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಸಂಬಂಧ ಶಾಲಾ ಆಡಳಿತ ಮಂಡಳಿ ಅರಣ್ಯ ಇಲಾಖೆ ಮಾಹಿತಿ ನೀಡಿದ್ದು, ಮಂಗಳವಾರ ಇಲಾಖೆ ಸಿಬ್ಬಂದಿ ಶಾಲಾ ಆವರಣದಲ್ಲಿ ಚಿರತೆ ಸೆರೆಗೆ ಬೋನು ಇರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net