ಮೇವು ತರಲು ಹೋದಾಗ ಜಮೀನಿನಲ್ಲಿ ಕಾಣಿಸಿಕೊಂಡ ಚಿರತೆ: ಅರಣ್ಯ ಇಲಾಖೆಗೆ ಪತ್ರ ಬರೆದ ಸೂನಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ

Rmgm-Ph-001-Chirathe-Story-Photo- Chirathe Lalinayakanbadoddi Gudde- -3-2-2024
Published on

ಮಂಡ್ಯ: ತಾಲೂಕಿನ ಕೊತ್ತತ್ತಿ ಹೋಬಳಿಯ ಸೂನಗಹಳ್ಳಿ ಗ್ರಾಮದಲ್ಲಿ ಶನಿವಾರ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಬೆಳಗ್ಗೆ 7ಗಂಟೆಗೆ ಸುಮಾರಿಗೆ ಗ್ರಾಮಸ್ಥರು ಜಾನುವಾರುಗಳಿಗೆ ಮೇವು ತರಲು ಹೋದಾಗ ಪಟ್ಟಲದಮ್ಮ ದೇವಸ್ಥಾನದ ಸಮೀಪ ಚಿರತೆ ಕಾಣಿಸಿಕೊಂಡಿದೆ. ಮಾತ್ರವಲ್ಲದೆ ಮೂರು ದಿನದ ಹಿಂದೆ ಚಿಕ್ಕಕಾಲುವೆ ಸಮೀಪ ಮೇಕೆಯನ್ನು ಕೊಂದು ತಿಂದು ಹಾಕಿತ್ತು. ಇದರಿಂದಾಗಿ ಗ್ರಾಮಸ್ಥರು ಜಮೀನಿಗೆ ತೆರಳಲು ಭಯಬೀತಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ನೀಡಿದ ಮನವಿ ಮೇರೆಗೆ ಸೂನಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು, ಚಿರತೆ ಸೆರೆಗೆ ತುರ್ತು ಕ್ರಮ ವಹಿಸುವಂತೆ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net