

ಮಂಡ್ಯ: ತಾಲೂಕಿನ ಬಿ.ಹೊಸೂರು ಗ್ರಾಮದ ಕಬ್ಬಿನ ಜಮೀನಿನಲ್ಲಿ ಅರಣ್ಯ ಇಲಾಖೆಯಿಂದ ಇಡಲಾಗಿದ್ದ ಬೋನಿಗೆ ಸೋಮವಾರ ಹೆಣ್ಣು ಚಿರತೆ ಸೆರೆಯಾಗಿದೆ.
ಗ್ರಾಮದ ಕುಮಾರ್ ಎಂಬುವರ ಜಮೀನಿನಲ್ಲಿ ಕಳೆದ ಶುಕ್ರವಾರ ಕಾರ್ಮಿಕರು ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆ ಮತ್ತು ಮರಿ ಕಂಡುಬಂದಿದ್ದವು. ಕೂಡಲೇ ಜಮೀನಿನ ಮಾಲೀಕ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಆಗಮಿಸಿದ ಅಧಿಕಾರಿಗಳು ಬೋನನ್ನು ಇರಿಸಿದ್ದರು. ಮೂರು ದಿನದ ಕಾರ್ಯಾಚರಣೆ ಬಳಿಕ ಚಿರತೆ ಸೆರೆಯಾಗಿದೆ.
ಚಿರತೆ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಬಳಿಕ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಯನ್ನು ಬೋನಿನ ಸಹಿತ ಲಾರಿಯಲ್ಲಿ ತೆಗೆದುಕೊಂಡು ಹೋದರು. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.