ದೇಶಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

IMG-20251101-WA0487
ದೇಶಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ
Published on

ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಬಾಳೆ ತೋಟದಲ್ಲಿ ಚಿರತೆ ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಸುಮಾರು 2 ವರ್ಷದ ಹೆಣ್ಣು ಚಿರತೆ ಸೆರೆಯಾಗಿದ್ದು, ಬೋನಿನಲ್ಲಿಟ್ಟಿದ್ದ ನಾಯಿ ತಿನ್ನಲು ಬಂದು ಸಿಕ್ಕಿ ಬಿದ್ದಿದೆ. ಈ ಭಾಗದಲ್ಲಿ ಮೂರು ಚಿರತೆಗಳು ಕಂಡು ಬಂದಿತ್ತು, ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳು ದೂರು ನೀಡಿದ್ದ ಹಿನ್ನೆಲೆಯಲ್ಲಿ 15 ದಿನಗಳ ಹಿಂದೆ ಬೋನು ಇಡಲಾಗಿತ್ತು. ಇನ್ನೂ ಎರಡು ಚಿರತೆಗಳಿದ್ದು, ಅವುಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ತಾಲೂಕು ವಲಯ ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತು ಅರಣ್ಯಾಧಿಕಾರಿ ಚಿನ್ನಪ್ಪ ಭೇಟಿ ನೀಡಿ ಮೇಲಧಿಕಾರಿಗಳ ಗಮನಕ್ಕೆ ತಂದು ಚಿರತೆಯನ್ನು ಮೀಸಲು ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net