ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ, ಮನೆ ಮನೆಗೂ ಆಶಾ ಕಾರ್ಯಕರ್ತೆಯರ ಭೇಟಿ

26CBP3
Published on

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಕುಷ್ಠರೋಗ ನಿಮೂರ್ಲನಾ ಕಾರ್ಯಕ್ರಮದಡಿ ಜು.29 ರಿಂದ ಆ.14 ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನವನ್ನು ಕೈಗೊಳ್ಳಲಾಗಿದೆ.

ಕಳೆದ ಒಂದು ದಶಕದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ 786 ಕುಷ್ಠ ರೋಗ ಪ್ರಕರಣಗಳು ವರದಿಯಾಗಿದ್ದು ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 35 ರೋಗ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್​ ಕುಮಾರ್​ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವತಿಯಿಂದ ಕೈಗೊಂಡಿರುವ ಆಂದೋಲನದಲ್ಲಿ ಜಿಲ್ಲಾದ್ಯಂತ 1040 ತಂಡಗಳು ಭಾಗವಹಿಸುತ್ತಿದ್ದು 104 ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಹಾಗೂ ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಉಸ್ತುವಾರಿಗಳಾಗಿದ್ದು ಜಿಲ್ಲಾ ಕುಷ್ಠ ರೋಗ ನಿಮೂರ್ಲನಾ ವಿಭಾಗದಿಂದ ಪ್ರತಿ ದಿನ ಆಶಾ ಕಾರ್ಯಕರ್ತೆಯರು ಗ್ರಾಮಗಳಲ್ಲಿ ಕ್ಷೇತ್ರ ಸಮೀಕ್ಷೆ ನಡೆಸಿ, ಶಂಕಿತ ಪ್ರಕರಣಗಳನ್ನು ಗುರುತಿಸಲಿದ್ದು ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಂದ ದೃಢಪಡಿಸಿ, ರೋಗಿಗಳಿಗೆ ಚಿಕಿತ್ಸೆಗೆ ಕೊಡಿಸುವರು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಇಲ್ಲವೇ ಸಹಾಯವಾಣಿ ಸಂಖ್ಯೆ:104 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದೆಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net