ಭಾರತೀಯರಲ್ಲಿ ಪ್ರತಿಕಾರದ ಜ್ವಾಲೆ

UNTILETED 18
Published on

ಕುಷ್ಟಗಿ: ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಭಾರತ ದಾಳಿ ನಡೆಸಿ ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿರುವ ಭಾರತೀಯ ಸೇನೆಯ ಕಾರ್ಯಾಚರಣೆಗೆ ತಾಲೂಕಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಸಂಭ್ರಮಾಚರಿಸಿದರು.

ಪಟ್ಟಣದ ಮಲ್ಲಯ್ಯ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು, ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡು ಜಯಘೋಷ ಕೂಗಿದರು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ ಯಾದವ್ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯದ ನಂತರ ಭಾರತೀಯರಲ್ಲಿ ಪ್ರತಿಕಾರದ ಜ್ವಾಲೆ ಉರಿಯುತ್ತಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಪರೇಷನ್ ಸಿಂಧೂರ ಮೂಲಕ ಉಗ್ರರ ಹುಟ್ಟಡಗಿಸುವ ರೀತಿಯಲ್ಲಿ ಪೆಟ್ಟು ನೀಡಿದ್ದಾರೆ ಎಂದರು. ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಬದಾಮಿ, ಜಿಪಂ ಮಾಜಿ ಸದಸ್ಯ ಕೆ.ಮಹೇಶ, ಪುರಸಭೆ ಅಧ್ಯಕ್ಷ ಮಹಾಂತೇಶ ಕಲಬಾವಿ, ಸದಸ್ಯರಾದ ಜೆ.ಜಿ.ಆಚಾರ್, ರಾಜೇಶ ಪತ್ತಾರ, ಪ್ರಮುಖರಾದ ರವಿಕುಮಾರ ಮದ್ದಾನಿ ಹಿರೇಮಠ, ಈರಣ್ಣ ಸೊಬರದ್, ದೊಡ್ಡಬಸವ ಸುಂಕದ್, ವೀರೇಶ ಕರಡಿ, ಪ್ರಕಾಶ ತಾಳಕೇರಿ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net