ಕಡಿಮೆ ಅವಧಿಯಲ್ಲಿ ಹೆಚ್ಚು ಕಬ್ಬು ನುರಿಸಲಿ

16ckd1
Published on

ಚಿಕ್ಕೋಡಿ: ಕೆಎಲ್‌ಇ ಸಂಸ್ಥೆ ನಿರ್ದೇಶಕ ಡಾ.ಪ್ರಭಾಕರ ಕೋರೆ ಮಾರ್ಗದರ್ಶನ ಹಾಗೂ ಕಾರ್ಖಾನೆ ನಿರ್ದೇಶಕ ಅಮಿತ ಕೋರೆ ಮುಂದಾಳತ್ವದಲ್ಲಿ ಕಾರ್ಖಾನೆ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಹೇಳಿದರು.

ಇಲ್ಲಿನ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ 2025-26ರ ಹಂಗಾಮಿನ ಪೂರ್ವಸಿದ್ಧತಾ ಕೆಲಸಗಳಿಗೆ ಕಾರ್ಖಾನೆಯ ರೋಲರ್ ಪೂಜೆ ನೆರವೇರಿಸಿ ಮಾತನಾಡಿ, ಕಾರ್ಖಾನೆ ಕಾರ್ಮಿಕರು, ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದ ಕಬ್ಬು ನುರಿಸಿ ಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ಮೂಲಕ ಗುರಿ ತಲುಪಬೇಕು ಎಂದರು.

ಕಾರ್ಖಾನೆ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ಸಂಚಾಲಕರಾದ ಅಜಿತ್ ದೇಸಾಯಿ, ಭರತೇಶ ಬನವನೆ, ಮಲ್ಲಪ್ಪ ಮೈಶಾಳೆ, ಚೇತನ ಪಾಟೀಲ, ಭೀಮಗೌಡ ಪಾಟೀಲ, ಅಣ್ಣಾಸಾಹೇಬ ಇಂಗಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net