ಆರ್ಥಿಕ ಪರಿಸ್ಥಿತಿ ಕುರಿತು ಸಿಎಂ ಶ್ವೇತಪತ್ರ ಹೊರಡಿಸಲಿ

KS ESWARAPPA PRESS MEET (3)
Published on

ರಾಯಚೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆಗೆ ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಇನ್ನೂ ಬರ ಪರಿಹಾರಕ್ಕೆ ಹಣ ಎಲ್ಲಿದೆ. ಮುಖ್ಯ ಸಿದ್ಧರಾಮಯ್ಯ ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ಯಾವ ಜಿಲ್ಲಾಕಾರಿಗಳ ಬಳಿ ಹಣವಿಲ್ಲ. ಇರುವ ಹಣ ಕುಡಿಯುವ ನೀರು ಸರಬರಾಜು, ಮೇವು ಸಂಗ್ರಹಕ್ಕೆ ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಬದಲು ತನ್ನ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಪತ್ರ ಹೊರಡಿಸಲಿ ಎಂದರು.
ಸರ್ಕಾರ ಅಕಾರಕ್ಕೆ ಬಂದು ಆರು ತಿಂಗಳು ಗತಿಸಿದೆ. ಶಾಸಕರ ವಿವೇಚನಾ ನಿಗೆ ಹಣ ನೀಡಿಲ್ಲ. ಪ್ರತಿ ಶಾಸಕರಿಗೆ 2 ಕೋಟಿ ರೂ. ವಿವೇಚನಾ ನಿಯಲ್ಲಿ ಕೇವಲ 50 ಲಕ್ಷ ರೂ. ಬಿಡುಗಡೆಗೆ ಪತ್ರ ನೀಡಲಾಗಿದೆ ಹೊರತು ಬಿಡುಗಡೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ಸಾಧ್ಯವಾಗುತ್ತಿಲ್ಲ.
ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಗಣತಿಗೆ 168 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ವರದಿಗೆ ಕಾರ್ಯದರ್ಶಿಯ ಸಹಿ ಇಲ್ಲದಿರುವುದು ರದ್ದತಿಗೆ ಸಮಾನ. ವರದಿಗೆ ಲಿಂಗಾಯತರು, ಒಕ್ಕಲಿಗರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗದಂತೆ ವರದಿ ವೈಜ್ಞಾನಿಕರಬೇಕು. ವರದಿ ಪೂರ್ಣ ಪ್ರಮಾಣದಲ್ಲಿ ಇರದಿರುವಾಗ ಮಂಡಿಸಲು ಹೇಗೆ ಸಾಧ್ಯ.
ಜಾತಿ ಗಣತಿ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣಗಳು, ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕೇ ಹೊರತು ರಾಜಕೀಯ ಮಾಡಬಾರದು. ಸಿದ್ದರಾಮಯ್ಯ ಸಿಎಂ ಆಗಿರುವ ತನಕ ಕಾಂತರಾಜ ವರದಿ ಜಾರಿಯಾಗುವುದೇ ಇಲ್ಲ. ಸರ್ವ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು.
ಸಂಸತ್ ಮೇಲೆ ನಡೆದ ದಾಳಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆಯಿಂದ ಬಹಿರಂಗವಾಗಲಿದೆ. ಪಾಸ್ ನೀಡಿದ ಮಾತ್ರಕ್ಕೆ ಪ್ರತಾಪಸಿಂಹ ಅಪರಾ ಎಂದು ಹೇಳಲಾಗದು. ಭದ್ರತೆ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ.
ಪಕ್ಷದಲ್ಲಿ ನನ್ನನ್ನು ಸೈಡ್‌ಲೈನ್ ಮಾಡಲಾಗಿದೆ ಎನ್ನುವುದು ಸುಳ್ಳು. ನಾನೇ ಖುದ್ದಾಗಿ ವಿಧಾನಸಭೆ ಚುನಾವಣೆಗೆ ಸ್ಪರ‌್ಸುವುದಿಲ್ಲ ಎಂದು ಹೇಳಿದ್ದೆ. ನನ್ನ ಮಗ ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾನೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬಂಡೇಶ ವಲ್ಕಂದಿನ್ನಿ, ನರಸಪ್ಪ ಯಕ್ಲಾಸಪುರ, ಶಿವರಾಜ, ಮಹಾಂತೇಶ ಅತ್ತನೂರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net