ಎಲ್ಲರಿಗೂ ಸಂವಿಧಾನದ ಅರಿವಿರಲಿ

1
ಗೋಕಾಕ ನಗರದಲ್ಲಿ ಸಂವಿಧಾನ ಜಾಗತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಸನತ ಜಾರಕಿಹೊಳಿ, ಲಕ್ಷ್ಮಣ ಬಬಲಿ, ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಸುರೇಶ ಸನದಿ ಇತರರಿದ್ದರು.
Published on

ಗೋಕಾಕ: ಯುವಜನರು ದೇಶದ ಭವಿಷ್ಯವಾಗಿದ್ದು, ಸಂವಿಧಾನದ ಅರಿವು ಹೊಂದಿ ಏಕತೆಗೆ ಶ್ರಮಿಸಬೇಕು ಎಂದು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಪೌರಾಡಳಿತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಂವಿಧಾನ ಜಾಗತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ತಹಸೀಲ್ದಾರ್ ಡಾ.ಮೋಹನ ಭಸ್ಮೆ ಮಾತನಾಡಿದರು. ಸುರೇಶ ಸನದಿ, ತಾಲೂಕಾಧಿಕಾರಿಗಳು, ದಸಂಸ ಮುಖಂಡರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net