ಕಾಲೇಜು ಸಮಗ್ರ ಅಭಿವೃದ್ಧಿಗೊಳ್ಳಲಿ

Published on

ಬಳ್ಳಾರಿ : ನಗರದಲ್ಲಿನ ಎಸ್‌ಎಸ್‌ಎ ಪ್ರಥಮ ದರ್ಜೆ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕ ನಾರಾ ಭರತರೆಡ್ಡಿ ಹೇಳಿದರು.

ನಗರದ ಸರಳಾ ದೇವಿ ಸತೀಶ್ಚಂದ್ರ ಆಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಜ್ಞಾನ ಸಿಂಚನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಪ್ರಸ್ತುತ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಹಳೆಯ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ನಗರದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇದೇ ಬಡ ವಿದ್ಯಾರ್ಥಿಗಳು ಹೆಚ್ಚಾಗಿ ಅಭ್ಯಾಸ ಮಾಡುತ್ತಿದ್ದಾರೆ. ಆದ್ದರಿಂದ, ಈಗಾಗಲೇ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಸಭಾಂಗಣ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗಾಗಿ ಏಳು ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ಹೆಗಡೆ ಮಾತನಾಡಿ, ಸಂಘವು ಅಭಿವೃದ್ದಿ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಉದ್ದೇಶಗಳನ್ನು ಇಟ್ಟುಕೊಂಡು ಮುನ್ನಡೆಯುತ್ತಿದೆ. ಇದೇ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಾಯ ಮತ್ತು ಸಹಕಾರವನ್ನು ನೀಡುವಲ್ಲಿ ಈ ಸಂಘವು ಸದಾ ಸಿದ್ಧವಾಗಿರುತ್ತದೆ. ಅಲ್ಲದೆ ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ನೀಗಿಸುವಲ್ಲಿ ಮುಂಚೂಣಿಯಲ್ಲಿ ಇರುತ್ತದೆ ಎಂದರು.

ಯಶಸ್ಸು ಯಾರದ್ದೇ ಸ್ವತ್ತಲ್ಲ. ಅದು ಗಂಭೀರವಾಗಿ ಆಲೋಚಿಸಿ ನೇರ ಗುರಿ ಇಟ್ಟುಕೊಂಡು ಹೋಗುವವರ ಹಿಂದೆ ಬೆನ್ನು ಹತ್ತಿ ತಾನೇ ಬರುತ್ತದೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net