ಬೇಲೂರು ಸಮಗ್ರ ಅಭಿವೃದ್ಧಿಯಾಗಲಿ

23blrp1
ಬೇಲೂರು ನೂತನ ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಅವರನ್ನು ಶಿವಜ್ಯೋತಿ ಪಣ ಗಾಣಿಗರ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.
Published on

ಬೇಲೂರು: ಪ್ರವಾಸಿ ಕೇಂದ್ರವಾದ ಬೇಲೂರು ಪಟ್ಟಣದ ಸಮಗ್ರ ಅಭಿವೃದ್ಧಿ ಯೋಜನೆಗಳಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಹೇಳಿದರು.

ಪುರಸಭೆ ಕಚೇರಿಯಲ್ಲಿ ಪಟ್ಟಣದ ಶಿವಜ್ಯೋತಿ ಪಣ ಗಾಣಿಗರ ಸಂಘದಿಂದ ಶುಕ್ರವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಯುನೆಸ್ಕೋ ಪಟ್ಟಿಗೆ ಸೇರ್ಪಡೆಯಾಗಿದ್ದು, ಪ್ರವಾಸಿಗರು ಹಾಗೂ ಸ್ಥಳೀಯ ನಾಗರಿಕರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು. ಜತೆಗೆ ಪಟ್ಟಣದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ಸಂಘ-ಸಂಸ್ಥೆಗಳ ಪ್ರಮುಖರರಿಂದ ಸಲಹೆ ಸಹಕಾರ ಪಡೆದು ಉತ್ತಮ ಆಡಳಿತ ನಡೆಸಲು ಚಿಂತನೆ ನಡೆಸಿದ್ದೇನೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ನನ್ನನ್ನೆ ಭೇಟಿ ಮಾಡಿ ಪರಿಹರಿಸಿಕೊಳ್ಳುವಂತೆ ಮನವಿ ಮಾಡಿದರು.

ಶಿವಜ್ಯೋತಿ ಪಣ ಗಾಣಿಗರ ಸಂಘದ ಅಧ್ಯಕ್ಷ ಬಿ.ಎಲ್ ನಾಗರಾಜು ಮಾತನಾಡಿ, ಎ.ಆರ್.ಅಶೋಕ್ ಯುವಕರಾಗಿದ್ದು, ಕಳೆದ ಎರಡು ಬಾರಿ ಸದಸ್ಯರಾಗಿರುವ ಅವರು ಉತ್ತಮ ಆಡಳಿತ ನೀಡುವ ಭರವಸೆ ಇದ್ದು, ಪ್ರಥಮವಾಗಿ ಮುಖ್ಯರಸ್ತೆ ವಿಸ್ತರಣೆ ಹಾಗೂ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಬೇಕಿದೆ. ಅಲ್ಲದೆ ಬೀಡಾಡಿ ದನಗಳು, ನಾಯಿಗಳ ನಿಯಂತ್ರಣಕ್ಕೆ ಮುಂದಾಗುವ ಮೂಲಕ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಮುಂದಾಗಬೇಕು ಎಂದರು.

ಶಿವಜ್ಯೋತಿ ಪಣ ಗಾಣಿಗರ ಸಂಘದ ಕಾರ್ಯದರ್ಶಿ ಎನ್.ಅನಂತು ಮಾತನಾಡಿ, ಪಟ್ಟಣದಲ್ಲಿ ಸಮರ್ಪಕ ಕುಡಿಯುವ ನೀರಿನ ಯೋಜನೆ, ಬೀದಿ ದೀಪ, ರಸ್ತೆ, ಚರಂಡಿಗಳ ನಿರ್ಮಾಣ ಮಾಡುವ ಮೂಲಕ ನೂತನ ಅಧ್ಯಕ್ಷರು ನಗರವನ್ನು ಮಾದರಿಯಾಗಿ ಮಾಡುವುದಕ್ಕೆ ಮುಂದಾಗಬೇಕಿದೆ. ಚನ್ನಕೇಶವ ದೇವಾಲಯ ಯುನೆಸ್ಕೋ ಪಟ್ಟಿಗೆ ಸೇರಿರುವುದರಿಂದ ಹೆಚ್ಚಿನ ಅನುದಾನ ತರಲು ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದರು.

ಶಿವಜ್ಯೋತಿ ಪಣ ಗಾಣಿಗರ ಸಂಘದ ಖಜಾಂಚಿ ಬಿ.ಎಸ್.ಮಂಜುನಾಥ್, ನಿರ್ದೇಶಕರಾದ ಚಂದ್ರಶೇಖರ್, ಬಿ.ಎನ್.ರಮೇಶ್, ಪುರಸಭಾ ಸದಸ್ಯ ಜಗದೀಶ್, ಪ್ರಭಾಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net