

ಚಿಕ್ಕೋಡಿ: ಕೂಡಲೇ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ರಚಿಸುವಂತೆ ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿಯಿಂದ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಈಚೆಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಜನಪ್ರನಿಧಿಗಳು ಚಿಕ್ಕೋಡಿ ಜಿಲ್ಲೆ ಹೆಸರು ಹೇಳಿ ಅಧಿಕಾರ ಅನುಭವಿಸುತ್ತಿದ್ದಾರೆ. ಕೊಟ್ಟ ಮಾತು ತಪ್ಪಿ ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡಲು ಪ್ರಯತ್ನಿಸುವೆ ಎಂದು ಹೇಳಿದರು.
ಜಿಲ್ಲಾ ಹೋರಾಟ ಸಮಿತಿ ಸದಸ್ಯರಾದ ಮಹಾವೀರ ಮೋಹಿತೆ, ಅಣ್ಣಪ್ಪ ನಸಲಸಪುರೆ, ರಾಜು ಕೋಟಗಿ, ಸಂತೋಷ ಪೂಜೇರಿ, ಕಾರ್ಯದರ್ಶಿ ಚಂದ್ರಕಾಂತ ಹುಕ್ಕೇರಿ, ಹೋರಾಟಗಾರರಾದ ಅಮೂಲ ನಾವಿ, ಸಚಿವ ದೊಡ್ಡಮನಿ, ರಮೇಶ ಡಂಗೇರ, ಸಂಜಯ ಪಾಟೀಲ, ಬಸವರಾಜ ಸಾಜನೆ, ವಿಜಯ ಬ್ಯಾಳಿ, ರವಿ ನಾಯಿಕ ಇತರರಿದ್ದರು.