ಉತ್ತಮ ಪ್ರಜೆಗಳಾಗಿ ಮಕ್ಕಳು ರೂಪುಗೊಳ್ಳಲಿ

12M.D.R.7
ಮದ್ದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಮಾಲಾರ್ಪಣೆ ಮಾಡಿದರು. ಸಿ.ಎಚ್.ಕಾಳೀರಯ್ಯ, ಎನ್.ಪ್ರಸನ್ನ, ಗೀತಾ, ಸುಕನ್ಯ, ಮೋಹನ್, ಕಿರಣ್ ಇದ್ದರು.
Published on

ಮದ್ದೂರು: ವಿವೇಕಾನಂದ ಜಯಂತಿ ಅಂಗವಾಗಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ವತಿಯಿಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿ, ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳಿರಯ್ಯ, ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಕಾರ್ಯದರ್ಶಿ ಎನ್. ಪ್ರಸನ್ನ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೀತಾ, ಉಪ ಪ್ರಾಂಶುಪಾಲರಾದ ಸುಕನ್ಯ, ಶಿಕ್ಷಕರಾದ ಮೋಹನ್, ಕಿರಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net