

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ಸದೃಢವಾದ ಮನಸ್ಸು ಹೊಂದಿ ನಾಯಕತ್ವದ ಗುಣ ಬೆಳೆಸಿಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಬಾಹುಬಲಿ ಕುರಕುರಿ ಹೇಳಿದರು.
ನಗರದ ಜೆಎಸ್ಎಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವೇದಾವತಿ ತಿವಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ತಾಳ್ಮೆ ಮುಖ್ಯವಾಗಿದ್ದು, ಅದು ಮಕ್ಕಳ ಯಶಸ್ಸಿಗೆ ಕಾರಣವಾಗಿದೆ. ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕು ಎಂದರು.
ಮುಖ್ಯಾಧ್ಯಾಪಕಿ ಮೈನಾವತಿ ದಿವಟೆ ಅಧ್ಯಕ್ಷತೆ ವಹಿಸಿದ್ದರು. 2024-25ನೇ ಸಾಲಿನ ಶಾಲಾ ಮಂತ್ರಿಮಂಡಲಕ್ಕೆ ಪದಕ ವಿತರಣೆ ಮಾಡುವ ಮೂಲಕ ಅವರ ಕರ್ತವ್ಯ ನಿರ್ವಹಣೆಗೆ ಚಾಲನೆ ನೀಡಲಾಯಿತು. ಎಸ್ಸೆಸ್ಸೆಲ್ಸಿ ವಾಷಿರ್ಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನಿಸಲಾಯಿತು.
ಶೀತಲ್ ಕುಂದರ್ ಸ್ವಾಗತಿಸಿದರು. ರಾಜೇಶ್ವರಿ ಶೆಟ್ಟಿ ನಿರೂಪಿಸಿದರು. ಮಂಜುನಾಥ ವಂದಿಸಿದರು.