ಪೌಷ್ಟಿಕಾಂಶ ಆಹಾರ ಮಕ್ಕಳು ಸೇವಿಸಲಿ

8 NRD-3 POSHANA ABHIYANA
Published on

ನರಗುಂದ: ಮಕ್ಕಳು ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಸರ್ಕಾರವು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡುತ್ತಿದೆ. ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬಾರದು ಎಂದು ಅಂಗನವಾಡಿ ಮೇಲ್ವಿಚಾರಕಿ ಶಕುಂತಲಾ ಗಣಿ ಹೇಳಿದರು.

ಪೋಷಣ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಶಿಶು ಅಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ಕಸಬಾ ಬಡಾವಣೆಯ ಅಂಗನವಾಡಿ ಕೇಂದ್ರ ಸಂಖ್ಯೆ 12ರಲ್ಲಿ ಹಮ್ಮಿಕೊಂಡಿದ್ದ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ಪೌಷ್ಟಿಕ ಅಹಾರವು ಇತ್ತೀಚಿನ ದಿನಮಾನಗಳಲ್ಲಿ ಬಹಳ ಪ್ರಾಮುಖ್ಯತೆ ಪಡೆದಿದ್ದು, ಇದರ ಸದುಪಯೋಗವನ್ನು ತಾಲೂಕಿನ ಪ್ರತಿಯೊಬ್ಬ ಮಕ್ಕಳು, ಕಿಶೋರಿಯರು, ಗರ್ಭಿಣಿಯರು, ತಾಯಂದಿರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಬಂಡಾಯ ಸಾಹಿತಿ ಮಾರುತಿ ಭೋಸಲೆ ಮಾತನಾಡಿ, ಪೌಷ್ಟಿಕ ಆಹಾರದ ಜೊತೆಗೆ ಪ್ರತಿಯೊಬ್ಬರೂ ತಮ್ಮ ಆರೋಗ್ಯ, ವೈಯಕ್ತಿಕ ಸ್ವಚ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದರು.

ಅರ್ಜುನ ಮಾನೆ, ತಮ್ಮಣ್ಣ ಜಾಧವ, ಸುರೇಶ ನೇಸರಗಿ, ಸಾವಿತ್ರಿ ಭೋಸಲೆ, ಅನ್ನಪ್ಪ ಭೂಸಾರೆ, ಅಂಗನವಾಡಿ ಕಾರ್ಯಕರ್ತೆಯರಾದ ಲಕ್ಷ್ಮೀಬಾಯಿ ಗಾಯಕವಾಡ, ಬಿ.ಎಫ್. ನಧಾಪ್, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net