ಪಠ್ಯದೊಂದಿಗೆ ಸಾಮಾನ್ಯ ಜ್ಞಾನದತ್ತ ಮಕ್ಕಳು ಗಮನಹರಿಸಲಿ

ಬೇಲೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಬೇಲೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Published on

ಬೇಲೂರು: ಪಠ್ಯದ ಜತೆ ಸಾಮಾನ್ಯ ಜ್ಞಾನದತ್ತಲೂ ಗಮನಹರಿಸಿದರೆ ಮುಂದಿನ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅನುಕೂಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಿದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ವಿದ್ಯಾವಿಕಾಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಂ.ರಮೇಶ್ ಹೇಳಿದರು.

ಮಾನವ ಬಂಧುತ್ವ ವೇದಿಕೆ, ಮಹಿಳಾ ಮತ್ತು ವಿದ್ಯಾರ್ಥಿ ಬಂಧುತ್ವ ವೇದಿಕೆ ಹಾಗೂ ವಿದ್ಯಾ ವಿಕಾಸ್ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ  ಪಟ್ಟಣದ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ನಮ್ಮ ಹಕ್ಕು ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತದ ಸಂವಿಧಾನ ಪ್ರಪಂಚದಲ್ಲೇ ಉತ್ಕೃಷ್ಟವಾದದ್ದು. ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರೂ ಸಂವಿಧಾನದ ಮಹತ್ವ ಮತ್ತು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ತಿಳಿದು ಕೊಳ್ಳಬೇಕಿದೆ. ವಿದ್ಯಾರ್ಥಿಗಳು ಅಂಕಗಳಿಕೆಗೆ ಮಾತ್ರ ಸಮೀತವಾಗದೆ, ಸಾಮಾನ್ಯ ಜ್ಞಾನದತ್ತ ದೃಷ್ಟಿ ಹರಿಸಿದರೆ ಮುಂದಿವ ವಿದ್ಯಾಭ್ಯಾಸಕ್ಕೆ ಅನುಕೂಲ ಎಂದರು.

ಮಹಿಳಾ ಬಂಧುತ್ವ ವೇದಿಕೆ ಮಹಿಳಾ ಸಂಚಾಲಕಿ ಡಾ.ಲೀಲಾ ಸಂಪಿಗೆ ಮಾತನಾಡಿ, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯುವುದರಿಂದ ಭಾರತ ಪ್ರಪಂಚದಲ್ಲೇ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಮೊದಲಿಗನಾಗಿ ನಿಲ್ಲಬಹುದು ಎಂದರು.

ಹೃದಯ ತಜ್ಞ(ಯುಎಸ್‌ಎ) ಡಾ.ಗಿರೀಶ್ ಮೂಡ್, ನಿವೃತ್ತ ಶಿಕ್ಷಕಿ ಸೌಭಾಗ್ಯ, ತಾಲೂಕು ಎಸ್‌ಸಿ/ಎಸ್‌ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ್, ದಸಂಸ(ಅಂಬೇಡ್ಕರ್ ವಾದ)ವಿಭಾಗಿಯ ಸಂ.ಸಂಚಾಲಕ ಲಕ್ಷ್ಮಣ್, ಗಾಂಧಾರ ಬುದ್ಧ ವಿಹಾರ ಟ್ರಸ್ಟ್ ಉಪಾಧ್ಯಕ್ಷ ಮಂಜುನಾಥ್, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ರಂಗಸ್ವಾಮಿ, ಜಿಲ್ಲಾ ಸಂಚಾಲಕಿ ತಾರಾ, ವಿದ್ಯಾರ್ಥಿ ವೇದಿಕೆ ಸಂಚಾಲಕ ಲಿಖಿತ್ ರಕ್ಕಸ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net