ಕ್ರೀಡಾ ಚಟುವಟಿಕೆಯತ್ತ ಮಕ್ಕಳು ಗಮನ ಹರಿಸಲಿ

ಮಳವಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚಾಲನೆ ನೀಡಿದರು. ಉಮಾ, ಎಂ.ಕೆ.ಶ್ರೀನಿವಾಸ್, ನೂರುಲ್ಲಾ, ಟಿ.ಎಂ.ಪ್ರಕಾಶ್, ಸಿ.ಪಿ.ರಾಜು ಇದ್ದರು.

Published on

ಮಳವಳ್ಳಿ: ಶೈಕ್ಷಣಿಕ ಅಧ್ಯಯನದೊಂದಿಗೆ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಂಡರೆ ಭವಿಷ್ಯದ ದಿನಗಳಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಶನಿವಾರ ಪಟ್ಟಣದ ಕನಕದಾಸ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ಮತ್ತು 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪ್ರಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಮಾನಗಳಲ್ಲಿ ಬಹಳಷ್ಟು ಪಾಲಕರು ಶಿಕ್ಷಣ ಕಲಿಕೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯ ನೀಡುತ್ತಿದ್ದು, ಇದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಪಾಲಕರು ಇಂತಹ ಮನೋಭಾವನೆಯಿಂದ ಹೊರಬರಬೇಕು ಎಂದು ಕಿವಿಮಾತು ಹೇಳಿದರು.
ಬಿಇಒ ಉಮಾ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಎಂ.ಕೆ.ಶ್ರೀನಿವಾಸ್, ಪುರಸಭಾ ಸದಸ್ಯ ನೂರುಲ್ಲಾ, ಶಿಕ್ಷಣಾಸಕ್ತ ಟಿ.ಎಂ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಇತರ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net