ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ

ಸರಗೂರು ತಾಲೂಕಿನ ಹಾದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಜ್ಯೋತಿ, ಶಿವರಾಜು, ಭಾಗ್ಯಾ ಕೆಂಪಸಿದ್ದ, ರತ್ನಮ್ಮ ರಾಜೇಶ್, ಮಹೇಂದ್ರ, ಚಿನ್ನಸ್ವಾಮಿ ಇತರರು ಇದ್ದರು.
ಸರಗೂರು ತಾಲೂಕಿನ ಹಾದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಜ್ಯೋತಿ, ಶಿವರಾಜು, ಭಾಗ್ಯಾ ಕೆಂಪಸಿದ್ದ, ರತ್ನಮ್ಮ ರಾಜೇಶ್, ಮಹೇಂದ್ರ, ಚಿನ್ನಸ್ವಾಮಿ ಇತರರು ಇದ್ದರು.
Published on

ಸರಗೂರು: ಶಿಕ್ಷಣ ವ್ಯಾಪಾರೀಕರಣವಾಗಿರುವ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಿಸಿ ಉತ್ತಮ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ ಎಂದು ಹಾದನೂರು ಗ್ರಾಪಂ ಉಪಾಧ್ಯಕ್ಷ ಹಾದನೂರು ಪ್ರಕಾಶ್ ಹೇಳಿದರು.

ತಾಲೂಕಿನ ಹಾದನೂರು ಗ್ರಾಪಂ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಶನಿವಾರ ಹಾದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವರ್ಷವಿಡೀ ವ್ಯಾಸಂಗಕ್ಕೆ ಪೂರಕವಾಗಿ ಹಲವು ಪ್ರೋತ್ಸಾಹದಾಯಕ ಯೋಜನೆಗಳ ಮೂಲಕ ಮಕ್ಕಳಿಗೆ ಅಗತ್ಯ ಸವಲತ್ತು ನೀಡಲಾಗುತ್ತಿದೆ. ಗುಣಾತ್ಮಕ ಕಲಿಕೆಗೆ ಆದ್ಯತೆ ನೀಡುತ್ತಿದ್ದು, ಇಲ್ಲಿ ಕಲಿಯುವ ಪ್ರತೀ ವಿದ್ಯಾರ್ಥಿ ಯಶಸ್ಸು ಪಡೆಯಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಮಹತ್ವದ್ದಾಗಿದೆ ಎಂದರು.

ರಾಜ್ಯ ನೌಕರರ ಸಂಘದ ನಿರ್ದೇಶಕ ಕೆಂಪರಾಮೇಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಪಾಲಕರನ್ನು ಖಾಸಗಿ ಶಾಲೆಗಳ ವ್ಯಾಮೋಹ ವ್ಯಾಪಿಸಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿರುವುದು ಆತಂಕದ ಸಂಗತಿ ಎಂದರು.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ, ಮಕ್ಕಳ ಪಾಲಕರಲ್ಲಿ ಮಾತ್ರ ಖಾಸಗಿ ಶಾಲೆಗಳ ಕುರಿತಾದ ವ್ಯಾಮೋಹ ಕಡಿಮೆಯಾಗಿಲ್ಲ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿ ಕಾರ್ಯಕ್ರಮ ಗಮನ ಸೆಳೆಯಿತು. ಪಾಲಕರು ಹಾಗೂ ಮಕ್ಕಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಜ್ಯೋತಿ ರಮೇಶ್, ಸದಸ್ಯರಾದ ಶಿವರಾಜು, ಭಾಗ್ಯಾ ಕೆಂಪಸಿದ್ದ, ರತ್ನಮ್ಮ ರಾಜೇಶ್, ಎಸ್‌ಡಿಎಂಸಿ ಅಧ್ಯಕ್ಷ ಮಹೇಂದ್ರ, ಗ್ರಾಮಸ್ಥರಾದ ಮಹದೇವಸ್ವಾಮಿ, ನಾಗರಾಜು, ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ್ ಬಳಗದ ಅಧ್ಯಕ್ಷ ಚಿಕ್ಕಣ್ಣ, ಉಪಾಧ್ಯಕ್ಷ ಚೆಲುವರಾಜು, ಪಿಡಿಒ ಚಿನ್ನಸ್ವಾಮಿ, ಅಡುಗೆ ಗುತ್ತಿಗೆದಾರ ಸುರೇಶ್, ಶಶೈಶ್ಚರ ದೇವಸ್ಥಾನದ ಅರ್ಚಕ ನಾರಾಯಣಸ್ವಾಮಿ, ಶಾಲಾ ಗೌರವ ಶಿಕ್ಷಕ ಸಿದ್ದಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಮಹೇಂದ್ರ, ಉಪಾಧ್ಯಕ್ಷೆ ಹೊಂಬಾಳಮ್ಮ, ಸದಸ್ಯರಾದ ನಂಜುಂಡಸ್ವಾಮಿ, ಶಿವು, ಪಾಪಣ್ಣ, ಸ್ವಾಮಿ, ರಾಮಕೃಷ್ಣ, ಆಶಾ, ರೇಣುಕಾ, ರೂಪಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net