ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ

mdg 2 (2)
Published on

ಮೂಡಿಗೆರೆ: ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗದಂತೆ ಪಾಲಕರು ನಿಗವಹಿಸಬೇಕು ಎಂದು ಮೂಡಿಗೆರೆ ಜೆಎಂಎಫ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ವಿಶ್ವನಾಥ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜ ಉತ್ತಮ ರೀತಿಯಲ್ಲಿ ಸಾಗಬೇಕಾದರೆ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಪ್ರಜ್ಞಾವಂತರಾಗಬೇಕು. ಬಾಲಕಾರ್ಮಿಕ ಪದ್ಧತಿ ವಿರುದ್ಧ ದೇಶದಲ್ಲಿ ಕಾನೂನು ಬಿಗಿಯಾಗಿದ್ದರೂ ಕೂಡ ಬಾಲಕಾರ್ಮಿಕ ಪದ್ಧತಿ ನಡೆಯುತ್ತಿರುವುದು ದುರಂತ. ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯುವಂತಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದು ಹಾಗೂ ಬಾಲಕಾರ್ಮಿಕರು ಕಂಡುಬಂದರೆ ಕೂಡಲೇ ಆಯಾ ಶಾಲೆಯ ಶಿಕ್ಷಕರಿಗೆ ಅಥವ ಬಾಲ ಕಾರ್ಮಿಕ ವಿರೋಧಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎ.ಮೀನಾಕ್ಷಿ, ವಕೀಲರಾದ ರಿಜ್ವಾನ್ ಅಲಿ, ಕೆ.ಆರ್.ಹರ್ಷಾಂತ್, ಸಹಾಯಕ ಸರ್ಕಾರಿ ಅಭಿಯೋಜಕಿ ಟಿ.ರೂಪ, ಕಾರ್ಮಿಕ ಇಲಾಖೆ ನಿರೀಕ್ಷಕ ಎಚ್.ಕೆ.ಪ್ರಭಾಕರ್, ಉಪ ಪ್ರಾಚಾರ್ಯ ಎಂ.ಜಗದೀಶ್ ನಾಯಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net