ಅಭ್ಯಾಸದ ಕಡೆ ಮಕ್ಕಳು ಹೆಚ್ಚು ಗಮನ ಹರಿಸಲಿ

ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಎಲ್. ಕೃಷ್ಣೇಗೌಡ ಅವರನ್ನು ಅಭಿನಂದಿಸಲಾಯಿತು.
ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಎಲ್. ಕೃಷ್ಣೇಗೌಡ ಅವರನ್ನು ಅಭಿನಂದಿಸಲಾಯಿತು.
Published on

ಕೆ.ಎಂ.ದೊಡ್ಡಿ: ಪಠ್ಯ ಪುಸ್ತಕಗಳನ್ನು ಹೆಚ್ಚು ಅಭ್ಯಾಸ ಮಾಡುವುದರಿಂದ ಪ್ರಗತಿಹೊಂದಬಹುದು ಎಂದು ಮಂಡ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ್ಯಾಸಕ ಎಂ.ಎಲ್.ಕೃಷ್ಣೇಗೌಡ ಅಭಿಪ್ರಾಯಪಟ್ಟರು.

ಇಲ್ಲಿನ ಭಾರತೀ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಭಾರತೀ ಕಾಲೇಜು(ಸ್ವಾಯತ್ತ) ಮತ್ತು ಭಾರತೀ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಸಮಾಜಶಾಸ್ತ್ರ ವಿಭಾಗ ವತಿಯಿಂದ ಆಯೋಜಿಸಿದ್ದ ಆಗಸ್ಟ್ ಕಾಮ್ಟೆ ಅವರ 227ನೇ ಜನ್ಮ ದಿನಾಚರಣೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಶ್ನೆಪತ್ರಿಕೆ ಕಾರ್ಯಾಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಪರೀಕ್ಷೆ ಎಂಬ ಭಯಬಿಟ್ಟು ನಿರಂತರವಾಗಿ ಅಭ್ಯಾಸದ ಕಡೆ ಗಮನ ಹರಿಸಬೇಕು. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ಪರೀಕ್ಷೆ ದಿನ ಓದುವುದನ್ನು ಬಿಟ್ಟು ತರಗತಿಯಲ್ಲಿ ಪಾಠದ ಸಾರಂಶ ತಿಳಿದು ಮನನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಭಾರತೀ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಮಹದೇವಸ್ವಾಮಿ, ಪ್ರಶ್ನೆ ಪತ್ರಿಕೆಯಲ್ಲಿ ನೀಡಿರುವ ಸೂಚನೆಗಳನ್ನು ಮಕ್ಕಳು ಸರಿಯಾಗಿ ಅರ್ಥೈಸಿಕೊಂಡು ಪರೀಕ್ಷೆ ಬರೆಯಬೇಕೆಂದು ತಿಳಿಸಿದರು.

ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಬಿ.ಪಲ್ಲವಿ, ಭಾರತೀ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಎಸ್. ಜವರೇಗೌಡ ಮಾತನಾಡಿದರು. ಕಾರ್ಯಾಗಾರದಲ್ಲಿ ಸಂಚಾಲಕರಾದ ಲಾವಣ್ಯಾ, ಕೆ.ಸಿ.ಸುಂದರೇಶ್ , ಎಸ್. ಗೀತಾ ಎಂ.ಸಿ. ರಂಜಿತ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ಎಸ್.ಸಿ. ಮಾನಸ, ಹರ್ಷವರ್ಧನ, ಕನ್ನಡ ವಿಭಾಗದ ಮುಖ್ಯಸ್ಥ ಚೇತನ್ ಜಂಜೀರ್, ಬಸವರಾಜು ಎಸ್. ರಾಜೇಂದ್ರ ಪ್ರಸಾದ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net