ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

17 ckm 8 c.t.ravi
ಸುದ್ದಿಗಾರರೊಂದಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿದರು.
Published on

ಚಿಕ್ಕಮಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲುಕ ಮೇಲ್ಪಂಕ್ತಿ ಹಾಕಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಾ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ರಾಜ್ಯಪಾಲರು ಸಿಎಂ ವಿರುದ್ಧವೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇಂಥ ಸಂದರ್ಭ ಹಿಂದೆ ಬಂದಾಗ ಅಂದು ಸಿಎಂ ಆಗಿದ್ದವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಹೇಳಿದರು.
ರಾಮಕೃಷ್ಣ ಹೆಗ್ಡೆ ಅವರ ಮೇಲೆ ವಿವಿಧ ಹಗರಣಗಳ ಆರೋಪ ಬಂದಾಗ ರಾಜಿನಾಮೆ ನೀಡಿದ್ದರು. ಬಿ.ಎಸ್ ಯಡೀಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ತಕ್ಷಣ ರಾಜಿನಾಮೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ೪೦ ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವವರಾಗಿದ್ದು, ಆ ಮೇಲ್ಪಂಕ್ತಿಯನ್ನು ಪಾಲಿಸುತ್ತಾರೆಂಬ ನಂಬಿಕೆ ಇದೆ ಎಂದರು.
ರಾಜ್ಯದ ರಾಜಕೀಯ ನಾಯಕರು ಅನುಸರಿಸಿರುವ ನೈತಿಕ ಮೌಲ್ಯವನ್ನು ಸಿದ್ದರಾಮಯ್ಯ ಅವರೂ ಎತ್ತಿ ಹಿಡಿಯಬೇಕು ಎಂದು ವಿನಂತಿಸುತ್ತೇನೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net