ನಾಯಕ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲಿ

Published on

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನಾಯಕ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡಬೇಕು ಎಂದು ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ದ್ಯಾವಪ್ಪನಾಯಕ ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.
ಕ್ಷೇತ್ರದಲ್ಲಿ ನಾಯಕ ಸಮುದಾಯಕ್ಕೆ ಸೇರಿದ 2 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಆದರೂ ಜನಸಂಖ್ಯೆಗೆ ತಕ್ಕ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಸಾಮಾಜಿಕ ನ್ಯಾಯ ದೊರಕಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಮೈಸೂರು ವಿಭಾಗದಲ್ಲಿಯೂ 15 ಲಕ್ಷ ಮತದಾರರಿದ್ದೇವೆ. ಇಲ್ಲಿ ಟಿಕೆಟ್ ನೀಡಿದರೆ ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು ಕ್ಷೇತ್ರದಲ್ಲಿ ಪಕ್ಷಕ್ಕೆ ಸಹಕಾರವಾಗಲಿದೆ. ಬಿಜೆಪಿಯವರು ಅವಕಾಶ ನೀಡಿದರೂ ಸಹಕರಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಸಮುದಾಯದ ಮುಖಂಡರಾದ ಶಿವನಂಜಯ್ಯ ರಮ್ಮನಹಳ್ಳಿ, ವಾಲ್ಮೀಕಿ ನಿಂಗರಾಜ್, ಮಯೂರ ಕಲ್ಕುಣಿಕೆ, ಕೃಷ್ಣ ಸೋಮಶಪುರ, ಬನ್ನಿಕುಪ್ಪೆ ರಾಮಚಂದ್ರ, ಹುಣಸೂರು ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net