ನೌಕರರು ಆರೋಗ್ಯದ ಕಾಳಜಿ ವಹಿಸಲಿ

Let employees take care of their health.
ವಿಜಯಪುರದ ಜಿ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಒತ್ತಡ ನಿರ್ವಹಣೆ ಕಾರ್ಯಾಗಾರದಲ್ಲಿ ಜಿ.ಪಂ. ಸಿಇಒ ರಿಷಿ ಆನಂದ ಮಾತನಾಡಿದರು. ಡಾ. ವಿಜಯಕುಮಾರ ಆಜೂರ, ಡಾ. ಸಂಪತ್​ಕುಮಾರ ಗುಣಾರಿ ಇದ್ದಾರೆ.
Published on

ವಿಜಯಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಅಧಿಕಾರಿ&ನೌಕರರು ಒತ್ತಡದ ಕಾರ್ಯನಿರ್ವಹಣೆ ಮಧ್ಯೆದಲ್ಲೇ ತಮ್ಮ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಪಂ ಸಿಇಒ ರಿಷಿ ಆನಂದ ಸಲಹೆ ನೀಡಿದರು.

ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯ ಎಲ್ಲ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿಗೆ ನಗರದ ಜಿಪಂ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಹಾಗೂ ಒತ್ತಡ ನಿರ್ವಹಣೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನಿತ್ಯದ ಕರ್ತವ್ಯದ ಸಂದರ್ಭ ಹಲವು ಸವಾಲುಗಳು ಎದುರಾಗುತ್ತವೆ. ಅವುಗಳಿಗೆ ಒತ್ತಡಕ್ಕೊಳಗಾಗದೆ, ಸಮಾಧಾನವಾಗಿ ನಿಭಾಯಿಸಬೇಕು. ಅಲ್ಲದೆ, ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತುರ್ತಾಗಿ ಒದಗಿಸುವ ಒತ್ತಡಗಳಿರುತ್ತವೆ. ಅಂತಹ ಸಂದರ್ಭಗಳಲ್ಲಿ ತಾಳ್ಮೆಯಿಂದ ನಿಭಾಯಿಸುವ ಗುಣ ಅಳವಡಿಸಿಕೊಳ್ಳಬೇಕು. ಅಂದಾಗಲೇ ಮುಂಬರುವ ಸಮಸ್ಯೆ ಎದುರಿಸಲು ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗಲಿದೆ ಎಂದರು.

ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಅಧಿಕಾರಿ, ನೌಕರರ ಮತ್ತು ಸಿಬ್ಬಂದಿ ಆರೋಗ್ಯದ ಹಿತದೃಷ್ಟಿಯಿಂದ ವಿಶೇಷ ಕಾಳಜಿಯೊಂದಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಸಮಸ್ಯೆಗಳಿದ್ದಲ್ಲಿ ಭಯಪಡದೆ ಮುಕ್ತವಾಗಿ ವೈದ್ಯರೊಂದಿಗೆ ಮಾತನಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.

ಒಂದೆಡೆ ಕಚೇರಿ ಕೆಲಸ, ಇನ್ನೊಂದೆಡೆ ಕುಟುಂಬ ಜವಾಬ್ದಾರಿ ಬಗ್ಗೆ ಗಮನಹರಿಸುವ ಜತೆಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಿರುವುದಿಲ್ಲ. ಇವೆಲ್ಲದರ ಜತೆಗೆ ಕಚೇರಿ ಕೆಲಸ ನಿಭಾಯಿಸಬೇಕು. ಮಲ್ಟಿಟಾಸ್ಕ್​ ಮಾಡಬೇಕು ಎಂದರೆ ಮನಸ್ಸು, ದೇಹ ಎರಡೂ ಸದೃಢವಾಗಿರಬೇಕು. ಹೀಗಾಗಿ ಎಲ್ಲರೂ ತಪ್ಪದೆ ತಮ್ಮ ಆರೋಗ್ಯದ ಕಡೆ ಗಮನ ಹರಿಸುವಂತೆ ಅವರು ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್​ಕುಮಾರ ಗುಣಾರಿ, ಜಿಲ್ಲಾ ಕುಷ್ಠರೋಗ ನಿಮೂರ್ಲನಾ ಅಧಿಕಾರಿ ಡಾ. ಅರ್ಚನಾ ಕುಲಕರ್ಣಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಅಪ್ಪಾಸಾಹೇಬ ಇನಾಮದಾರ, ಜಿ.ಪಂ. ಅಭಿವೃದ್ಧಿ ಅಧಿಕಾರಿಗಳ ೇಮಾಭಿವೃದ್ಧಿ ಸಂದ ಜಿಲ್ಲಾಧ್ಯಕ್ಷ ಸಿ.ಜಿ. ಪಾರೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net