ಹಗುರ ಮಾತನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಲಿ

20 SARAG 2
ಸರಗೂರು ಪ್ರವಾಸಿ ಮಂದಿರದಲ್ಲಿ ಪ್ರಗತಿಪರ ಸಂಘಟನೆಗಳು ಮುಖಂಡರ ಸಭೆಯಲ್ಲಿ ನಾಗರಾಜು ಮಾತನಾಡಿದರು. ಶಿವಣ್ಣ, ಚಿಕ್ಕಣ್ಣ ಇತರರು ಇದ್ದರು.
Published on

ಸರಗೂರು: ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ಸರಗೂರು ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು ಕಿಡಿಕಾರಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿ, ಕೇಂದ್ರ ಗೃಹ ಸಚಿವರ ಹೇಳಿಕೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು ಎಂದು ಹೇಳಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ದರಾಜು ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್, ಅಂಬೇಡ್ಕರ್ ಟ್ರಸ್ಟ್‌ನ ನಾಗರಾಜು, ಅದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಚಿಕ್ಕಣ್ಣ .ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಚನ್ನೀಪುರ ನಾಗರಾಜು, ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್, ಚನ್ನೀಪುರ ಮಲ್ಲೇಶ್, ಕೆಂಡಗಣ್ಣಸ್ವಾಮಿ, ಹುಣಸಹಳ್ಳಿ ನಾಗರಾಜು, ಮಹೇಶ್, ಉಯ್ಯಂಬಳ್ಳಿ ನಾಗರಾಜು, ಲಂಕೆ ಲಕ್ಷ್ಮಣ್, ಚಿನ್ನಯ್ಯ, ದೊಡ್ಡಯ್ಯ, ಬಿಲ್ಲಯ್ಯ, ಮಲ್ಲಿಕಾರ್ಜುನ, ಚೆಲುವರಾಜು, ಇದಿಯಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net