ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಲಿ

28 HKR 01
Published on

ಹಿರೇಕೆರೂರ: ಬಾಲ್ಯ ವಿವಾಹ ಅತ್ಯಂತ ಘೊರ ಅಪರಾಧವಾಗಿದೆ. ಇದರ ಬಗ್ಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಜಾರಿಯಲ್ಲಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜೆಎಂಎಫ್​ಸಿ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶೆ ನಾಗರತ್ನಮ್ಮ ಹೇಳಿದರು.

ಪಟ್ಟಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಅಭಿಯೋಜನೆ ಇಲಾಖೆ, ವಕೀಲರ ಸಂಘದ ವತಿಯಿಂದ ಬಾಲ್ಯ ವಿವಾಹ ಪದ್ಧತಿ ನಿಮೂಲನೆ ದಿನದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಏರ್ಪಡಿಸಿದ್ದ ಜಾಗೃತಿ ಜಾಥಾ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ್ಯ ವಿವಾಹದಿಂದ ಮಹಿಳೆಯರ ಆರೋಗ್ಯ ಮತ್ತು ಮನಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಹಾಗೂ ಅವರಿಗೆ ಸಂಪೂರ್ಣವಾಗಿ ತಮ್ಮ ಜವಾಬ್ದಾರಿ ಬಗ್ಗೆ ಅರಿವು ಇರುವುದಿಲ್ಲ. ಯಾರೇ ಇಂತಹ ಕೃತ್ಯಕ್ಕೆ ಕೈ ಹಾಕಿದರೆ ತಕ್ಷಣ ರಕ್ಷಣಾ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಹೆಚ್ಚುವರಿ ದಿವಾಣಿ ನ್ಯಾಯಾಧೀಶೆ ಸವಿತಾ ಎನ್. ಮುಕ್ಕುಲ್, ತಹಸೀಲ್ದಾರ ಎಚ್.ಪ್ರಭಾಕರಗೌಡ, ವಕೀಲರ ಸಂಘದ ಪದಾಧಿಕಾರಿಗಳಾದ ಎಚ್.ಆರ್. ಬೆಳ್ಳೂರ, ಎಸ್.ಎಚ್. ಪಾಟೀಲ, ಹಿರಿಯ ವಕೀಲರಾದ ಎಸ್.ಬಿ. ತಿಪ್ಪಣ್ಣನವರ, ಜಿ.ವಿ. ಕುಲಕರ್ಣಿ, ದುರಗೇಶ ತಿರಕಪ್ಪನವರ, ಎಸ್.ಎನ್. ಮುಲ್ಲಾ, ಎ.ಎ. ಯಲಿವಾಳ, ಬಿ.ಜಿ. ಪಾಟೀಲ, ಎಲ್.ಎಚ್. ಕಳ್ಳಿಮನಿ ಹಾಗೂ ವಕೀಲರು, ಕೋರ್ಟ್ ಸಿಬ್ಬಂದಿ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net