ನಿಪ್ಪಾಣಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಜಿ.ಐ.ಬಾಗೇವಾಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಶನಿವಾರ ಅಂತರ್ ಮಹಾವಿದ್ಯಾಲಯಗಳ ಟೆನಿಸ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ಬ್ಲೂ ಆಯ್ಕೆ ಪ್ರಕ್ರಿಯೆ ನಡೆಯಿತು.
ಪಂದ್ಯಾವಳಿಯಲ್ಲಿ ಒಟ್ಟು 9 ಸ್ಪರ್ಧಿಗಳು ಭಾಗವಹಿಸಿದ್ದರು. ಜಿ.ಐ.ಬಾಗೇವಾಡಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅಭಿನಂದನ ಖುರ್ದ ಹಾಗೂ ಅಭಿನಂದನ ಸಮಾಜ ಸೇರಿದಂತೆ ಒಟ್ಟು ಐದು ವಿದ್ಯಾರ್ಥಿಗಳು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬ್ಲೂ ಆಗಿ ಆಯ್ಕೆಯಾದರು.
ಡಾ.ಸಿ.ಬಿ.ಕುರಬೆಟ್ಟಿ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ಬೌದ್ಧಿಕ ಸಾರ್ಮರ್ಥ್ಯ ವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು.
ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಮಹೇಶ ಬಾಗೇವಾಡಿ, ಪ್ರಾಚಾರ್ಯ ಡಾ.ಎಂ.ಎಂ.ಹುರಳಿ, ಐಕ್ಯೂಎಸಿ ಸಂಯೋಜಕ ಡಾ.ಅತುಲಕುಮಾರ ಕಾಂಬಳೆ, ಜಿಮಖಾನ ಅಧ್ಯಕ್ಷೆ ಮಂಜುಳಾ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್.ಕುಂಬಾರ ಇತರರಿದ್ದರು. ಚೈತ್ರಾ ಕೌಲಾಪುರೆ ಹಾಗೂ ಬಸವರಾಜ ಯಕ್ಸಂಬಿ ನಿರೂಪಿಸಿದರು.