ಸಂಸ್ಕೃತಿ ಉತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಲಿ

GJD KALAKAPPA
Published on

ಗಜೇಂದ್ರಗಡ: ದೇಶದ ಸಂಸ್ಕೃತಿ ಉಳಿಸುವ ಮತ್ತು ಪರಿಚಯಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವ ಮತ್ತು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ರೋಣ ರಸ್ತೆಯಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ಪ್ರಚಾರ ವಾಹನಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಸೇಡಂ ವಿಕಾಸ ಅಕಾಡೆಮಿ ಮತ್ತು ಭಾರತ ವಿಕಾಸ ಸಂಗಮ ಸಹಯೋಗದಲ್ಲಿ ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ಜ. 29ರಿಂದ ಫೆ. 6ರವರೆಗೆ ಉತ್ಸವ ನಡೆಯಲಿದೆ. ಸುಮಾರು 250 ಎಕರೆ ಪ್ರದೇಶದಲ್ಲಿ ಉತ್ಸವ ನಡೆಸಲಾಗುತ್ತಿದ್ದು, ಲಕ್ಷಾಂತರ ಜನ ಭಾಗಿಯಾಗಲಿದ್ದಾರೆ ಎಂದರು.

ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತು ಕಡಗದ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೊರ್ಪಡೆ, ಶಿವಾನಂದ ಮಠದ, ಉಮೇಶ ಮಲ್ಲಾಪೂರ, ಮಹಾಂತೇಶ ಸೋಮನಕಟ್ಟಿ, ವೀರಪ್ಪ ಪಟ್ಟಣಶೆಟ್ಟಿ, ಶ್ರೀನಿವಾಸ ಸವದಿ, ಭಾಸ್ಕರಸಾ ರಾಯಬಾಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net