ಪ್ರತಿಯೊಬ್ಬರೂ ಸ್ವಚ್ಛತೆಗೆ ಗಮನಹರಿಸಲಿ

ಪ್ರತಿಯೊಬ್ಬರೂ ಸ್ವಚ್ಛತೆಗೆ ಗಮನಹರಿಸಲಿ
Published on

ಹಾಸನ: ಪ್ರತಿಯೊಬ್ಬರೂ ಸ್ವಚ್ಛತೆ ಕಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಉತ್ತಮ ಪರಿಸರ ಕಾಪಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮೇನಹಳ್ಳಿ ಗ್ರಾಮಕ್ಕೆ ಗುರುವಾರ ತಾಪಂ ಇಒ ಗಿರೀಶ್ ನೇತೃತ್ವದಲ್ಲಿ ಸಿಬ್ಬಂದಿ ಭೇಟಿ ನೀಡಿ ಕಲ್ಯಾಣಿಯನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದ ಬಳಿಕ ಮಾತನಾಡಿದರು.

ಹಿಂದಿನ ಕಾಲದಲ್ಲಿ ಕಲ್ಯಾಣಿ, ಕೊಳಗಳೂ ಕುಡಿಯುವ ನೀರಿನ ಪ್ರಮುಖ ಮೂಲವಾಗಿತ್ತು. ಇಂದು ಕಲ್ಯಾಣಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಅವುಗಳನ್ನು ಉಳಿಸುವತ್ತ ಗಮನಹರಿಸಬೇಕಾಗಿದೆ. ಪ್ರತಿಯೊಬ್ಬರೂ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ ಒಣ ಕಸ ಮತ್ತು ಹಸಿ ಕಸ ವಿಂಗಡಣೆ ಮಾಡಿ ಗ್ರಾಮ ಪಂಚಾಯಿತಿ ವತಿಯಿಂದ ಬರುವ ಕಸದ ಆಟೋಗಳಿಗೆ ಹಾಕಬೇಕು ಎಂದು ಹೇಳಿದರು.

ಸ್ವಚ್ಛತೆಯನ್ನು ಕಾಪಾಡಿದರೆ ಡೆಂೆ, ಮಲೇರಿಯಾ, ಕ್ಷಯ ಸೇರಿದಂತೆ ಇತರ ಕಾಯಿಲೆಗಳನ್ನು ತಡೆಗಟ್ಟಬಹುದು. ಜತೆಗೆ ಉತ್ತಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಸಹಕಾರಿ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಬಿ.ದಿನೇಶ್, ರಂಗಸ್ವಾಮಿ, ಹೊನ್ನಾವರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭಾ, ತಾಲೂಕು ಪಂಚಾಯಿತಿ ಸಿಬ್ಬಂದಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net