ಸಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಲಿ

ಸಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಲಿ
Published on

ಸರಗೂರು: ಸಮಾನತೆಗಾಗಿ ಜಾರಿಗೆ ತಂದಿರುವ ಕಾನೂನನ್ನು ಸದ್ಬಳಕೆ ಮಾಡಿಕೊಂಡು ಅಸಮಾನತೆ, ಅಸ್ಪ್ಪಶ್ಯತೆ ತೊಡೆದು ಹಾಕಿ ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ತಹಸೀಲ್ದಾರ್ ಮೋಹನಕುಮಾರಿ ಕರೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಮತ್ತು ಡ್ರೀಮ್ ಇಂಡಿಯಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಸ್ಪಶ್ಯತೆ ನಿವಾರಣೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಾಗೂ ವಿಚಾರಗೋಷ್ಠಿ ಕಮ್ಮಟಗಳ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಮತ್ತು ಕಾನೂನಿನ ಅರಿವಿನ ಕೊರತೆಯಿಂದ ಸಮಾಜದಲ್ಲಿ ಇಂದಿಗೂ ಅಸಮಾನತೆ ಮತ್ತು ಅಸ್ಪಶ್ಯತೆ ಜೀವಂತವಾಗಿವೆ. ಕಾನೂನಿನ ಅರಿವು ಎಲ್ಲರಿಗೂ ಇರಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಮತ್ತು ಕಾನೂನಿನ ಅರಿವು ಮೂಡಿಸಿ ಸಮಾಜದಲ್ಲಿ ಶೋಷಣೆ ಮತ್ತು ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರಬುನಾದಿ ಹಾಕಬೇಕು ಎಂದರು.

ದಸಂಸ ಮುಖಂಡ ಲಂಕೆ ಲಕ್ಷ್ಮಣ್ ಮಾತನಾಡಿ, ತಾಲೂಕಿನ ಸಾಗರೆ ಗ್ರಾಮದಲ್ಲಿನ ಮಾರಮ್ಮನ ದೇವಸ್ಥಾನಕ್ಕೆ ಎಸ್ಸಿ ಸಮುದಾಯದವರಿಗೆ ಪ್ರವೇಶ ಸಂಬಂಧಿಸಿದಂತೆ ಗೊಂದಲ ಉಂಟಾಗಿದ್ದು, ತಾಲೂಕು ಆಡಳಿತ ಗಮನಹರಿಸಿ ಬಗೆಹರಿಸಬೇಕೆಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ ಮಾತನಾಡಿ, ತಾಲೂಕು, ಹೋಬಳಿ ಮಟ್ಟದಲ್ಲಿ ಬೀದಿ ನಾಟಕ ಹಾಗೂ ವಿಚಾರಗೋಷ್ಠಿಗಳ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ವಕೀಲ ಕೃಷ್ಣಯ್ಯ ಮಾತನಾಡಿ, ಕಾನೂನು ಸೇವೆಯಿಂದ ಯಾರೂ ವಂಚಿತರಾಗಬಾರದು, ಜನಸಾಮಾನ್ಯರು ಇದರ ಸದುಪಯೋಗಪಡಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕೆಂದರು.

ಡ್ರೀಮ್ ಇಂಡಿಯಾ ಟ್ರಸ್ಟ್ ನಿರ್ದೇಶಕ ಸಚಿನ್, ಜಿಲ್ಲಾ ಎಸ್ಸಿ ಎಸ್ಟಿ ಸಮಿತಿ ಸದಸ್ಯ ವೇಣುಗೋಪಾಲ್, ಇಒ ಪ್ರೇಮ್‌ಕುಮಾರ್, ದಸಂಸ ಜಿಲ್ಲಾ ಸಂಚಾಲಕ ಇಟ್ನ ರಾಜಣ್ಣ, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್, ದಸಂಸ ಅಂಬೇಡ್ಕರ್ ವಾದ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಲಂಕೆ ಲಕ್ಷ್ಮಣ್, ಅಣ್ಣಯ್ಯ ಸ್ವಾಮಿ, ಎಸ್.ರವಿ, ಪ್ರಕಾಶ್, ಗೋಪಾಲ್, ಭೀಮಾ ಸೇನೆ ಅಧ್ಯಕ್ಷ ಮಹೇಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net