

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಯೋಜನಾ ಘಟಕ ಮತ್ತು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹವಾಮಾನ ಬದಲಾವಣೆಯಿಂದ ಆರೋಗ್ಯ ಸಮಸ್ಯೆ ಪರಿಹಾರ ಕುರಿತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೊಡ್ಲಿಪೇಟೆ ಆಯುಷ್ಮಾನ್ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಅನಿತಾ ಮಾತನಾಡಿ, ಹವಾಮಾನ ಬದಲಾವಣೆ ಸಂದರ್ಭ ಮಾನವನಿಗೆ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಪ್ರತಿಯೊಬ್ಬರೂ ಆರೋಗ್ಯ ಕಡೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.
ಪ್ರಾಂಶುಪಾಲ ಎಂ.ಆರ್.ನಿರಂಜನ್ ಇತರರು ಇದ್ದರು.