

ಗುಂಡ್ಲುಪೇಟೆ: ಸಮಾಜದಲ್ಲಿ ಅಸ್ಪಶ್ಯತೆ ನಿವಾರಣೆ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಡಿವೈಎಸ್‌ಪಿ ಲಕ್ಷ್ಮಯ್ಯ ಹೇಳಿದರು.
ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಅಸ್ಪಶ್ಯತೆ ನಿರ್ಮೂಲನೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕೃತಿಯಲ್ಲಿ ಎಲ್ಲರಿಗೂ ಒಂದೇ ಗಾಳಿ, ಬೆಳಕು ನೀರು ದೊರಕುತ್ತಿದ್ದರೂ ಮೇಲು- ಕೀಳು, ಜಾತಿ ವ್ಯವಸ್ಥೆ ಬಳಕೆಯಲ್ಲಿದ್ದುದರಿಂದ ಸಮಾಜದಲ್ಲಿ ಅಸ್ಪೃಶ್ಯತೆ ಚಲಾವಣೆಯಲ್ಲಿತ್ತು. ಆದರೆ, ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಅಸ್ಪೃಶ್ಯತೆ ನಿರ್ಮೂಲನೆಗೆ ಕಠಿಣವಾದ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಆದ್ದರಿಂದ ಗ್ರಾಮದಲ್ಲಿ ಯಾವುದೇ ರೀತಿಯ ಅಸ್ಪೃಶ್ಯತೆಗೆ ಅವಕಾಶ ನೀಡದೆ ಪ್ರತಿಯೊಬ್ಬರೂ ಪರಸ್ಪರ ಸಹಕಾರದಿಂದ ಶಾಂತಿಯುತ ಬಾಳ್ವೆ ನಡೆಸುವಂತಾಗಬೇಕು ಎಂದು ಹೇಳಿದರು.
ತಹಸೀಲ್ದಾರ್ ಟಿ.ರಮೇಶ್ ಬಾಬು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಮಾಜಿ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ವೆಂಕಟಯ್ಯ, ಸರ್ಕಲ್ ಇನ್‌ಸ್ಪೆೆಕ್ಟರ್ ಪರಶಿವಮೂರ್ತಿ, ಮುತ್ತಣ್ಣ, ಸುಭಾಷ್ ಮಾಡ್ರಹಳ್ಳಿ, ಸೋಮಣ್ಣ, ಚಿಕ್ಕಣ್ಣ ಇತರರು ಇದ್ದರು.