ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಶ್ರಮಿಸಲಿ

11Anand4
ನಗರದ ಬಿಜೆಪಿ ಗ್ರಾಮಾಂತರ ಕಚೇರಿಗೆ ಬುಧವಾರ ಭೇಟಿ ನೀಡಿದ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರನ್ನು ಜಿಲ್ಲೆಯ ಮುಖಂಡರು ಸತ್ಕರಿಸಿದರು. ಸುಭಾಷ ಪಾಟೀಲ, ಸಂಜಯ ಪಾಟೀಲ, ಲಕ್ಷ್ಮಣ ತಪಸಿ ಇತರರಿದ್ದರು.
Published on

ಬೆಳಗಾವಿ: ಭಾರತೀಯ ಜನತಾ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಮುಖಂಡರು ಮುಂದಾಗಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಸಲಹೆ ನೀಡಿದರು.

ನಗರ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಕಚೇರಿಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ನಮ್ಮ ಪಕ್ಷದ ಆಸ್ತಿ. ಪಕ್ಷದ ಬಲವರ್ಧನೆಗೆ ಎಲ್ಲರೂ ಮುಂದಾಗಬೇಕೆಂದರು. ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕಷ್ಣ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.

ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net